ಬೆಂಗಳೂರು: ಮೈತ್ರಿ ಸರ್ಕಾರದ ಕಾಂಗ್ರೆಸ್ ಪಕ್ಷದ ಪಾಲಿಗೆ ತೀವ್ರ ತಲೆ ನೋವಾಗಿದ್ದ ಸಂಪುಟ ವಿಸ್ತರಣೆ ಕಾರ್ಯಕ್ರಮ ಇಂದು ನಡೆದಿದ್ದು, ಸರ್ಕಾರದ ನೂತನ ಸಚಿವರಾಗಿ 8 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಇಂದು ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗಿಂತ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರೇ ಹೆಚ್ಚು ಮಿಂಚಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಹಾಜರಿದ್ದ ಸಚಿವ ಡಿಕೆಶಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಆಗಮಿಸಿದ ಶಾಸಕರನ್ನು ಬರಮಾಡಿಕೊಂಡರು. ಬಳ್ಳಾರಿ ಪಾಲಿಟಿಕ್ಸ್ ನಲ್ಲಿ ಗೆದ್ದ ಖುಷಿಯಲ್ಲಿ ಡಿಕೆಶಿವಕುಮಾರ್ ಕಾಲಿಗೆ ಪಿಟಿ ಪರಮೇಶ್ವರ್ ನಾಯ್ಕ್ ಮತ್ತು ತುಕಾರಾಂ ಬಿದ್ದು ಆಶಿರ್ವಾದ ತೆಗೆದುಕೊಂಡರು.
ಮೊದಲಿಗೆ ಎಂಬಿ ಪಾಟೀಲ್, ಆರ್‍ಬಿ ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಸಿಎಸ್ ಶಿವಳ್ಳಿ, ಪಿಟಿ ಪರಮೇಶ್ವರ ನಾಯ್ಕ್, ಇ ತುಕಾರಂ, ರಹೀಂ ಖಾನ್, ಎಂಟಿಬಿ ನಾಗರಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಉಳಿದಂತೆ ಬಳ್ಳಾರಿಯಲ್ಲಿ ತಮ್ಮ ರಾಜಕೀಯ ರಾಜಕೀಯ ಗೇಮ್ ಆಡಲು ಶುರುಮಾಡಿರುವ ಡಿಕೆಶಿ ಅವರು ತಮ್ಮದೇ ತಂತ್ರದ ಮೂಲಕ ಶಾಸಕರಿಗೆ ಸಚಿವ ಸ್ಥಾನ ಸಿಗುವಂತೆ ಮಾಡಿದ್ದಾರೆ ಎಂಬ ಚರ್ಚೆ ನಡೆದಿದೆ. ಬಳ್ಳಾರಿಯಿಂದ ಪಿ.ಟಿ ಪರಮೇಶ್ವರ್ ನಾಯ್ಕ್ ಮತ್ತು ತುಕಾರಂ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಡಿಕೆ ಶಿವಕುಮಾರ್ ತಮ್ಮ ಯೋಜನೆಯಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಳ್ಳಾರಿಯಿಂದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಮಂತ್ರಿ ಸ್ಥಾನ ಸಿಗುತ್ತದೆ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಅಂತಿಮ ಹಂತದಲ್ಲಿ ಪ್ರಭಾವಿಗಳಲ್ಲದ ಇಬ್ಬರು ನಾಯಕರಿಗೆ ಸಚಿವಗಿರಿ ಕೊಡಲಾಗುತ್ತಿದೆ. ಈ ಮೂಲಕ ನಾಗೇಂದ್ರ ಮತ್ತು ಆನಂದ್ ಸಿಂಗ್ ಮಂತ್ರಿಯಾದರೇ ಬಳ್ಳಾರಿಯಲ್ಲಿ ತಮ್ಮ ಪ್ರಾಬಲ್ಯವಿರುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಅವರೇ ಅವರಿಬ್ಬರ ಮಂತ್ರಿ ಸ್ಥಾನಕ್ಕೆ ಕೊಕ್ಕೆ ಹಾಕಿದ್ದಾರೆ ಎಂದು ಬಳ್ಳಾರಿ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.
ತುಕಾರಂ – ಪಿ.ಟಿ ಪರಮೇಶ್ವರ್ ನಾಯ್ಕ್
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv