ಕೋಲ್ಕತ್ತಾ: ಇಡಿ ದಾಳಿ ನಡೆಸಿದಾಗ ನನ್ನ ಮನೆಯಲ್ಲಿ ಸಿಕ್ಕಿದ್ದ ಹಣ ನನಗೆ ಸೇರಿದ್ದಲ್ಲ, ಬದಲಿಗೆ ನನ್ನ ಅನುಪಸ್ಥಿತಿಯಲ್ಲಿ ಆ ಹಣವನ್ನು ಇಲ್ಲಿ ಇರಿಸಲಾಗಿದೆ ಎಂದು ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ತಿಳಿಸಿದರು.
ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿರುವ ಆಕೆಯ ಮನೆಗಳಿಂದ ಜಾರಿ ನಿರ್ದೇಶನಾಲಯ (ಇಡಿ) ಈ ಹಿಂದೆ 50 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 3 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, IX-XII ತರಗತಿಗಳ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಚಟರ್ಜಿ ಭಾಗಿಯಾಗಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ಜುಲೈ 22 ರಂದು ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ರೂ. ತನಿಖಾ ಸಂಸ್ಥೆಯು 56 ಲಕ್ಷ ರೂ. ವಿದೇಶಿ ಕರೆನ್ಸಿ ಮತ್ತು 76 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದೆ. ಇದಾದ ಕೆಲವೇ ದಿನಗಳಲ್ಲಿ ಅರ್ಪಿತಾ ಮುಖರ್ಜಿ ಅವರ ಎರಡನೇ ಅಪಾರ್ಟ್‍ಮೆಂಟ್‍ನಿಂದ ಇಡಿ 28.90 ಕೋಟಿ ರೂ. ನಗದು, 5 ಕೆ.ಜಿಗೂ ಹೆಚ್ಚು ಚಿನ್ನ ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವಸೂಲಿಯಾದ ಮೊತ್ತವು ಶಿಕ್ಷಕರ ನೇಮಕಾತಿ ಹಗರಣದಿಂದ ಅಪರಾಧದ ಆದಾಯ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ
ಈ ಹಿಂದೆ ಇಡಿ ತನಿಖೆಗೆ ಒಳಪಟ್ಟ ಬಳಿಕ ಅರ್ಪಿತಾ ಮುಖರ್ಜಿ ಈ ಹಣ ಚಟರ್ಜಿ ಅವರಿಗೆ ಸೇರಿದ್ದಾಗಿ ತಿಳಿಸಿದ್ದು, ಈ ಹಣವನ್ನು ತನಗೆ ಸಂಬಂಧಿಸಿದ ಕಂಪನಿಯಲ್ಲಿ ತುಂಬಿಸಬೇಕಾಗಿತ್ತು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದರು. ಅರ್ಪಿತಾ ವಿಚಾರಣೆಯ ಸಂದರ್ಭ ಇಡಿ ರೇಡ್‍ಗೂ ಮುನ್ನ 1-2 ದಿನಗಳಲ್ಲಿ ತನ್ನ ಮನೆಯಲ್ಲಿದ್ದ ಹಣದ ರಾಶಿಯನ್ನು ಸ್ಥಳಾಂತರಿಸುವ ಯೋಜನೆ ಮಾಡಿದ್ದಾಗಿ ಬಹಿರಂಗಪಡಿಸಿದ್ದರು. ಇದನ್ನೂ ಓದಿ: HDK ಬೆಂಗಾವಲು ವಾಹನ ಅಪಘಾತ – ಮೂವರಿಗೆ ಗಂಭೀರ ಗಾಯ