ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ – ಯುಪಿಯಲ್ಲಿ ಪ್ರಿಯಾಂಕಾ ಗಾಂಧಿ ಕ್ರಾಂತಿಕಾರಿ ನಿರ್ಧಾರ

Public TV
2 Min Read
Priyanka Gandhi 2

ನವದೆಹಲಿ: 2022 ರ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸನ್ನದ್ಧವಾಗುತ್ತಿದ್ದು, ಈ ಬಾರಿ ಆಡಳಿತರೂಢ ಬಿಜೆಪಿಯನ್ನು ಎದುರಿಸಲು ಕ್ರಾಂತಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಹಾದಿಯಲ್ಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಮುಂಬರುವ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಚುನಾವಣೆ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ಲಕ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಹಿಳೆಯರಿಂದಲೇ ಬದಲಾವಣೆ ಸಾಧ್ಯ. ಈ ಹಿನ್ನಲೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಿದರು.

priyanka gandhi

ಪ್ರತಿಜ್ಞೆ ಹೆಸರಿನಲ್ಲಿ ಕ್ಯಾಂಪೇನ್ ಆರಂಭಿಸಿರುವ ಪ್ರಿಯಾಂಕಾ ಚುನಾವಣಾ ರಾಜಕೀಯದಲ್ಲಿ ಹಲವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿ ಏಕಾಂಗಿಯಾಗಿ ಕಣಕ್ಕಿಳಿಯುವ ಲೆಕ್ಕಚಾರದಲ್ಲಿರುವ ಕಾಂಗ್ರೆಸ್ ಮಹಿಳಾ ಮತಗಳ ಮೇಲೆ ಹೆಚ್ಚು ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತಗಳನ್ನು ಸೆಳೆಯಲು ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಮುಂದಾಗಿದೆ ಎನ್ನಲಾಗಿದೆ.

ಮಹಿಳೆಯರನ್ನು ಸ್ವಾವಲಂಬಿ ಮಾಡಲು ಮತ್ತು ಮಹಿಳೆಯರ ಅಭಿವೃದ್ಧಿಗಾಗಿ ಶೇ.40 ರಷ್ಟು ರಾಜಕೀಯ ಮಾನ್ಯತೆ ನೀಡಲು ನಿರ್ಧಾರ ಮಾಡಿದೆ. ಮಹಿಳೆಯರು ಸಮಾಜವನ್ನು ಬದಲಿಸಬಲ್ಲರು. ಈ ಹಿನ್ನೆಲೆ ಅವರನ್ನು ರಾಜಕೀಯಕ್ಕೆ ಆಹ್ವಾನಿಸುತ್ತಿದ್ದೇನೆ. ಜಾತಿ-ಧರ್ಮ ಬಿಟ್ಟು ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಮಹಿಳೆಯರು ರಾಜಕೀಯಕ್ಕೆ ಬರಬೇಕು ಎಂದು ಪ್ರಿಯಾಂಕಾ ಗಾಂಧಿ ಕರೆ ಕೊಟ್ಟಿದ್ದಾರೆ.

2017 ರ ವಿಧಾನಸಭಾ ಚುನಾವಣೆಯಲ್ಲಿ 114 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಟಿಕೆಟ್ ನೀಡಿತ್ತು. ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 384 ಅಭ್ಯರ್ಥಿಗಳ ಪಟ್ಟಿಯಲ್ಲಿ 43 ಮಹಿಳೆಯರಿಗೆ ಟಿಕೆಟ್ ನೀಡಿದ್ದರೆ, ಸಮಾಜವಾದಿ ಪಕ್ಷ (ಎಸ್ಪಿ) 33 ಮಹಿಳೆಯರಿಗೆ ಟಿಕೆಟ್ ನೀಡಿದೆ. ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಯಿಂದ 19 ಮಹಿಳೆಯರಿಗೆ ಟಿಕೆಟ್ ನೀಡಲಾಗಿತ್ತು. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ 

priyanka gandhi

ಸದ್ಯ ನೀಡಿರುವ ಭರವಸೆಯಿಂದ ಹೊಸ ಕ್ರಾಂತಿ ಸೃಷ್ಟಿಯಾಗಿದ್ದು ಮುಂಬರುವ ಚುನಾವಣೆಯಲ್ಲಿ ಎಲ್ಲ 403 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ರೆ 160 ಸ್ಥಾನಗಳನ್ನು ಮಹಿಳೆಯರಿಗೆ ನೀಡಬೇಕಿದೆ. ಇನ್ನು ಇದು ಇತರೆ ಪಕ್ಷಗಳ ಮೇಲೂ ಪರಿಣಾಮ ಬೀರಲಿದ್ದು ಶೇ.60 ರಷ್ಟಿರುವ ಮಹಿಳಾ ಮತಗಳನ್ನು ಸೆಳೆಯಲು ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಅನಿವಾರ್ಯತೆ ಬಂದಿದೆ. ಅದೇನೇ ಇದ್ದರೂ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲಿ ಶೇ.40 ರಷ್ಟು ಟಿಕೆಟ್ ಹಂಚಿಕೆ ಉತ್ತರ ಪ್ರದೇಶ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಇಡೀ ಕುಟುಂಬವನ್ನೇ ಜೀವಂತ ಸುಟ್ಟ ತಂದೆ

Share This Article
Leave a Comment

Leave a Reply

Your email address will not be published. Required fields are marked *