Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ

Districts

ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ

Public TV
Last updated: April 24, 2018 2:10 pm
Public TV
Share
2 Min Read
bsy amith shah
SHARE

ಬೆಂಗಳೂರು: “ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ನಿಮ್ಮ ಮಗನಿಗೆ ಇನ್ನೂ ಭವಿಷ್ಯವಿದ್ದು, ಪಕ್ಷದಲ್ಲಿ ಕೆಲಸ ಮಾಡಲಿ” ಈ ಸಂದೇಶವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಎಸ್ ಯಡಿಯರೂಪ್ಪನವರಿಗೆ ತಿಳಿಸಿದ್ದಾರೆ.

ವಿಜಯೇಂದ್ರ ಅವರಿಗೆ ವರುಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪನವರ ಜೊತೆ ಮಾತನಾಡಿ, ನಮಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು, ನೀವು ಸಿಎಂ ಆಗಬೇಕು. ಆದರೆ ನಿಮ್ಮ ಮಗ ಏನಾಗಬೇಕು ಎಂಬುದು ನಮಗೆ ಬೇಕಿಲ್ಲ. ನಮ್ಮಲ್ಲಿ ವ್ಯಕ್ತಿಗಿಂತಲೂ ಪಕ್ಷ ಮುಖ್ಯವಾಗಿದ್ದು ಸಮಯ ಬಂದಾಗ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಬಿಎಸ್‍ವೈಗೆ ಅಮಿತ್ ಶಾ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

ವರುಣಾದಲ್ಲಿ ವಿಜಯೇಂದ್ರ ಪ್ರಚಾರ ಆರಂಭಿಸುವಾಗಲೇ ಕರ್ನಾಟಕದ ಉಸ್ತುವಾರಿ ಹೊತ್ತಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಿಎಸ್‍ವೈ ಬಳಿ, ಯಡಿಯೂರಪ್ಪನವರೇ ಯಾವುದೇ ರಾಜ್ಯದಲ್ಲಿ ತಂದೆ ಮಕ್ಕಳಿಗೆ ಒಂದೇ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ. ಸ್ವತಃ ಮೋದಿಯವರೇ ಈ ವಿಚಾರದ ವಿರುದ್ಧವಾಗಿದ್ದಾರೆ ಎಂದು ತಿಳಿಸಿದ್ದರಂತೆ. ಈ ಸಂದರ್ಭದಲ್ಲಿ ವರುಣಾದಲ್ಲಿ ಅಖಾಡ ಹೇಗಿದೆ ಎನ್ನುವುದನ್ನು ನೋಡಿಕೊಂಡು ಮುಂದೆ ನಿರ್ಧಾರ ಮಾಡೋಣ ಎಂದು ಬಿಸ್‍ವೈ ಹೇಳಿದ್ದರಂತೆ.

ಈ ಮಧ್ಯೆ ವಿಜಯೇಂದ್ರ ಪ್ರಚಾರ ಜೋರಾಗುತ್ತಿದ್ದಂತೆ ವರುಣಾದ ಅಭ್ಯರ್ಥಿ ಎಂದೇ ಬಿಂಬಿತವಾಗತೊಡಗಿತ್ತು. ವರುಣಾ ಟಿಕೆಟ್ ಘೋಷಣೆಯಾಗದೇ ಇದ್ದರೂ ವಿಜಯೇಂದ್ರ ಅವರನ್ನು ಬಿಎಸ್‍ವೈ ಅಭ್ಯರ್ಥಿಯಂತೆ ಬಿಂಬಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕರು ಕೆಲ ದಿನಗಳಿಂದ ಚರ್ಚೆ ನಡೆಸುತ್ತಲೇ ಇದ್ದರು.

amith shah

ತಿರಸ್ಕರಿಸಿದ್ದು ಯಾಕೆ?
ಚುನಾವಣಾ ಪ್ರಚಾರ ಭಾಷಣದ ವೇಳೆ ಮೋದಿ, ಅಮಿತ್ ಶಾ ಆದಿಯಾಗಿ ಎಲ್ಲ ನಾಯಕರು ಕಾಂಗ್ರೆಸ್ ವಂಶಪಾರಂಪರ್ಯ ಪಕ್ಷ ಎಂದು ದೂಷಿಸಿಕೊಂಡೇ ಬಂದಿದ್ದಾರೆ. ಒಂದು ವೇಳೆ ಬಿಎಸ್‍ವೈ ಮಗನಿಗೆ ಟಿಕೆಟ್ ನೀಡಿದರೆ ಈ ಆರೋಪ ಮಾಡಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಟಿಕೆಟ್ ನೀಡಿದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸಿದಂತೆ ಆಗುತ್ತದೆ. ಹೀಗಾಗಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೇ ಇರುವ ನಿರ್ಧಾರಕ್ಕೆ ಬಿಜೆಪಿ ನಾಯಕರು ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್‍ವೈಗೆ ಮೂಗುದಾರ?
ಬಿಎಸ್‍ವೈಗೆ ಮೂಗುದಾರ ಹಾಕಿ ಕೈ ಸುಟ್ಟುಕೊಳ್ಳುತ್ತಾ ಬಿಜೆಪಿ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಪುತ್ರನಿಗೆ ಟಿಕೆಟ್ ಕೊಡದವರು. ಬಿಎಸ್‍ವೈಗೆ ಸಿಎಂ ಕುರ್ಚಿ ಕೊಡ್ತಾರಾ ಎನ್ನುವ ಪ್ರಶ್ನೆ ಬಿಎಸ್‍ವೈ ಆಪ್ತ ವಲಯದಲ್ಲಿ ಎದ್ದಿದೆ.

ಲಿಂಗಾಯತ ಸಮುದಾಯದ ಬಿಜೆಪಿ ಮುಖಂಡರಲ್ಲೂ ಆಕ್ರೋಶ ಹೆಚ್ಚಾಗಿದ್ದು, ಮೇಲ್ನೋಟಕ್ಕೆ ಒಪ್ಪಿಗೆ ಸೂಚಿಸಿದ್ರೂ ಒಳಗೊಳಗೆ ಬಿಎಸ್‍ವೈ ಸಿಟ್ಟಾಗಿದ್ದಾರೆ ಎನ್ನಲಾಗಿದೆ. ಅನಂತ್ ಕುಮಾರ್, ಸಂತೋಷ್ ವಿರುದ್ಧ ಬಿಎಸ್‍ವೈ ಗರಂ ಆಗಿದ್ದು, ಇಬ್ಬರ ಕುತಂತ್ರದಿಂದಲೇ ಟಿಕೆಟ್ ತಪ್ಪಿದೆ ಎಂದು ಬಿಎಸ್‍ವೈ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಎಲ್ಲವನ್ನೂ ಮೀರಿ ಬಿಜೆಪಿ ಹೈಕಮಾಂಡ್ ಕರ್ನಾಟಕ ಗೆಲ್ಲಲು ಮಾಡುವ ಪ್ಲ್ಯಾನ್ ಸಕ್ಸಸ್ ಆಗುತ್ತಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

TAGGED:ಅಮಿತ್ ಶಾಕಾಂಗ್ರೆಸ್ಪಿಯೂಶ್ ಗೊಯಲ್ಬಿಜೆಪಿವರುಣಾವಿಜಯೇಂದ್ರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
2 minutes ago
S Madhu Bangarappa
Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
By Public TV
3 minutes ago
BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
29 minutes ago
Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
46 minutes ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
51 minutes ago
Weather
Bengaluru City

ಬೆಂಗಳೂರಿಗರೇ ಕೇರ್‌ಫುಲ್ – ಮುಂದಿನ ಮೂರು ದಿನ ನಗರದಲ್ಲಿ ಬಿಸಿ ಗಾಳಿ ಎಚ್ಚರಿಕೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?