ಬೆಂಗಳೂರು: ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP) ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.
ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್
Advertisement
Advertisement
ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ
Advertisement
Advertisement
ರಾಜ್ಯ ಸರ್ಕಾರ (Government of Karnataka) ಮನಸ್ಸು ಮಾಡಿದ್ರೆ ಯಾವುದೂ ದೊಡ್ಡ ವಿಚಾರ ಅಲ್ಲ. ತಮ್ಮೆಲ್ಲರ ಆಶೀರ್ವಾದದಿಂದ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಹಾಗೆಯೇ ನಾನು ಕೂಡ ಹಿಂದೆ ಸರಿಯಲ್ಲ. ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ಹೆಜ್ಜೆ ಇಟ್ಟಿದ್ದೇನೆ. 15 ದಿನದಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಪ್ರಣಾಳಿಕೆಯಲ್ಲಿ ನಿವೃತ್ತ ನೌಕರರ ವಿಚಾರವನ್ನೂ ಇಟ್ಟಿದ್ದೇನೆ. ಸರ್ಕಾರ ನಿಮ್ಮ ಹೋರಾಟಕ್ಕೆ ತಲೆ ಬಾಗಲೇಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಕರೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ಎನ್‌ಪಿಎಸ್ (NPS) ನೌಕರರ ಸಂಘದ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ. ಹೊಸ ಪಿಂಚಿಣಿ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.