ತಾಂತ್ರಿಕ ದೋಷದಿಂದ ರಷ್ಯಾ ವಿಮಾನ ಪತನ – 48 ಮಂದಿ ಸಾವು

Public TV
1 Min Read
Plane Crash

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ (Russian Passenger plane) ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು (Plane Crash), 48 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.

ಸೈಬೀರಿಯಾ ಮೂಲದ ಅಂಗಾರ (Angara) ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ AN-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ (Tynda) ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿರುವುದು ತಿಳಿದುಬಂದಿದೆ. ಇದನ್ನೂ ಓದಿ: 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್‌ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ. ಇದನ್ನೂ ಓದಿ: ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

ವಿಮಾನದಲ್ಲಿದ್ದ ಎಲ್ಲಾ 50 ಮಂದಿ ಸಾವನ್ನಪ್ಪಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆ TASS ಹೇಳಿದೆ. ಆದ್ರೆ ಅಧಿಕೃತವಾಗಿ ಸಾವನ್ನಪ್ಪಿರುವುದು ಬಹಿರಂಗವಾಗಿಲ್ಲ. ಈ ನಡುವೆ ಹೆಲಿಕಾಪ್ಟರ್‌ನ ಅವಶೇಷಗಳನ್ನು ರಕ್ಷಣಾ ಹೆಲಿಕಾಪ್ಟರ್‌ಗಳು ಪತ್ತೆಹಚ್ಚಿರುವುದಾಗಿ ರಷ್ಯಾದ ತುರ್ತು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು ಡಿಕ್ಕಿ

Share This Article