ಧಾರವಾಡ: ಬಿಆರ್‌ಟಿಎಸ್(BRTS) ಚಿಗರಿ ಬಸ್(Bus) ಒಂದರಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯನ್ನು ನೋಡಿದ ಪ್ರಯಾಣಿಕರು(Passengers) ಎದ್ನೋ ಬಿದ್ನೋ ಎಂದು ಬಸ್‌ನಿಂದ ಇಳಿದು ಓಡಿ ಹೋಗಿದ್ದಾರೆ.
ಧಾರವಾಡ(Dharwad) ಜುಬ್ಲಿ ವೃತ್ತದಲ್ಲಿ ಬಸ್ ಅನ್ನು ನಿಲ್ಲಿಸಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರಿದ್ದ ಬಸ್ ಅನ್ನು ಚಾಲಕ ಕೋರ್ಟ್ ವೃತ್ತದ ಬಿಆರ್‌ಟಿಎಸ್ ಕಾರಿಡಾರ್‌ಗೆ ತೆಗೆದುಕೊಂಡು ಹೋಗಿದ್ದಾರೆ.
ಹೊಗೆ ಹೆಚ್ಚುತ್ತಿದ್ದಂತೆ ಬಸ್ ಅನ್ನು ನಿಲ್ಲಿಸಿ, ಪ್ರಯಾಣಿಕರು ಅದರಿಂದ ಇಳಿದು ಓಡಿದ್ದಾರೆ. ಬಳಿಕ ಚಾಲಕ ಬಸ್‌ನಲ್ಲಿದ್ದ ಬೆಂಕಿ ನಂದಿಸುವ ಫಾಗ್ ಹೊಡೆದು ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದಾರೆ. ಅದೇ ಸಮಯಕ್ಕೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಒಂದು ದೊಡ್ಡ ದುರಂತ ತಪ್ಪಿದಂತಾಗಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ
ಘಟನೆಯ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬೇಟಿ ನೀಡಿದ ಎಸಿಪಿ ಹಾಗೂ ಉಪನಗರ ಠಾಣೆ ಪೊಲೀಸರು, ಬಸ್ ಅನ್ನು ಡಿಪೋಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ – ನಲಪಾಡ್ ಅಕಾಡೆಮಿಗೆ ಬಿಗ್ ರಿಲೀಫ್