ಬೆಂಗಳೂರು: ಬಿಎಂಟಿಸಿ ಬಸ್‍ನಲ್ಲಿ ಇನ್ನು ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್, ವಸ್ತು ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಆದೇಶ ಹೊರಡಿಸಿದ್ದಾರೆ.
ಬಿಎಂಟಿಸಿ ಬಸ್‍ನಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ನಿಷೇಧಿಸಿರುವ ಬಿಎಂಟಿಸಿ ಅಡಳಿತ ಮಂಡಳಿ, ಪ್ಲಾಸ್ಟಿಕ್‍ನ್ನು ತರದಂತೆ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸುತ್ತೋಲೆ ಕಳುಹಿಸಿದ್ದಾರೆ.
Advertisement
Advertisement
ಬಸ್ಸಿನ ಒಳಗಡೆ ಪ್ರಯಾಣಿಕರು ಪ್ಲಾಸ್ಟಿಕ್ ಕವರುಗಳನ್ನು ತರುವುದನ್ನು ನಿಷೇಧಿಸಬೇಕೆಂದು ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ಕವರುಗಳನ್ನು ಬಳಸುವುದನ್ನು ನಿಷೇಧಿಸಬೇಕು, ಹಾಗೂ ಪ್ರಯಾಣಿಕರು, ಸಿಬ್ಬಂದಿಗಳು ಮತ್ತು ಅಧಿಕಾರಿಗಳಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಿ. ನಮ್ಮ ಬೆಂಗಳೂರು ನಗರ ಮತ್ತು ಸಂಸ್ಥೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಬೇಕು ಎಂದು ಶಿಖಾ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.