ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ (US President Election) ಹಿಂದೆ ಸರಿದ ಬಗ್ಗೆ ಅಧ್ಯಕ್ಷ ಜೋ ಬೈಡೆನ್ (Joe Biden) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಪೀಳಿಗೆಯನ್ನು ಬೆಳಕಿಗೆ ತರುವುದು ಮುಖ್ಯ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಪಕ್ಷ ಮತ್ತು ದೇಶವನ್ನು ಒಗ್ಗೂಡಿಸಲು 2024ರ ಚುನಾವಣೆಯಿಂದ ಹೊರಗುಳಿದಿರುವುದಾಗಿ ಬೈಡೆನ್ ಹೇಳಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದರ ರಕ್ಷಣೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರವು ಮುಖ್ಯವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಗ್ಯಾಂಗ್ ರೇಪ್!
- Advertisement
ಹೊಸ ಪೀಳಿಗೆಯನ್ನು ಬೆಳಕಿಗೆ ತರಬೇಕಿದೆ ಎಂದು ನಾನು ನಿರ್ಧರಿಸಿದ್ದೇನೆ. ಅದು ನಮ್ಮ ರಾಷ್ಟ್ರವನ್ನು ಒಂದುಗೂಡಿಸಲು ಉತ್ತಮ ಮಾರ್ಗ ಎಂದು ಬೈಡೆನ್ ತಿಳಿಸಿದ್ದಾರೆ.
- Advertisement
ಅಧ್ಯಕ್ಷೀಯ ಚುನಾವಣೆ ಸಮೀಪಿಸುತ್ತಿದ್ದಂತೆ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಹೆಚ್ಚು ಸಕ್ರಿಯರಾಗಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಯಸ್ಸು ಮತ್ತು ಮಾನಸಿಕ ಸಾಮರ್ಥ್ಯದ ಬಗ್ಗೆ ಪಕ್ಷದೊಳಗಡೆಯೇ ಅಸಮಾಧಾನ ಎದ್ದಿತ್ತು. ಈ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷೀಯ ಚುನಾವಣಾ ರೇಸ್‌ನಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: Nepal Plane Crash; ಟೇಕಾಫ್ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು
ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಭಾರತ ಸಂಜಾತೆ ಕಮಲಾ ಹ್ಯಾರೀಸ್ ಅವರ ಹೆಸರನ್ನು ಘೋಷಿಸಲಾಗಿದೆ. ಬೈಡೆನ್ ನಿರ್ಧಾರಕ್ಕೆ ಪಕ್ಷದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.