2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

Public TV
2 Min Read
mng muslims caa nrc protest 3

– ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳಿಗೆ ಅನುಕೂಲ

ನವದೆಹಲಿ: ಧಾರ್ಮಿಕ ಕಿರುಕುಳದಿಂದ (Religious Persecution) ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.

ಪಾಸ್‌ಪೋರ್ಟ್‌ (Passport) ಅಥವಾ ಇತರ ಪ್ರಯಾಣ ದಾಖಲೆಗಳಿಲ್ಲದೇ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಕ್ರೈಸ್ತರು ಹಾಗೂ ಪಾರ್ಸಿಗಳಿಗೆ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದಾಗಿ ಹೇಳಿದೆ. ಜೊತೆಗೆ ದೇಶ ಪ್ರವೇಶಿಸಿದ್ದು ದಾಖಲೆಗಳು ಸಿಂಧುತ್ವದ ಅವಧಿ ಮೀರಿದ್ದರೆ ಅಂತಹವರಿಗೂ ಈ ನಿಯಮ ಅನ್ವಯಿಸಲಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

Narendra Modi Amit Shah 2

ಕಳೆದ ವರ್ಷ ಮಾರ್ಚ್‌ 11ರಂದು ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಪ್ರಕಾರ, 2014 ಡಿಸೆಂಬರ್‌ 31ರ ನಂತರ ಅಥವಾ ಅದಕ್ಕೂ ಮುನ್ನ ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಬಂದ ಅಲ್ಪಸಂಖ್ಯಾತ ಸದಸ್ಯರಿಗೆ ಭಾರತದ ಪೌರತ್ವ ನೀಡಲಾಗುವುದು. 2025ರ ವಲಸೆ ಮತ್ತು ವಿದೇಶಿಗರ ಕಾಯ್ದೆ ಅಡಿಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇದರಿಂದ 2014ರ ನಂತರ ಭಾರತಕ್ಕೆ ವಲಸೆ ಬಂದು ತಮ್ಮ ಬಗ್ಗೆ ಚಿಂತಿತರಾಗಿದ್ದ ಪಾಕಿಸ್ತಾನದ ಹಿಂದೂಗಳಿಗೆ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಜನರಿಗೆ ಅನುಕೂಲ ಆಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

CAA protest

ಸಿಎಎಯಲ್ಲಿ ಏನಿದೆ?
ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?

Share This Article