ನವದೆಹಲಿ: ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ (Passport Seva Kendra) ತೆರೆಯಲಾಗುವುದು ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಹೇಳಿದ್ದಾರೆ.
ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರವಾದ ಮಧ್ಯಪ್ರದೇಶದ ಗುಣದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸುತ್ತಾ ಸಿಂಧಿಯಾ ಈ ಘೋಷಣೆ ಮಾಡಿದರು. ಈ ವರ್ಷ ಮಧ್ಯಪ್ರದೇಶದಲ್ಲಿ ಆರು ಹೊಸ ಪಾಸ್‌ಪೋರ್ಟ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಯಾರೂ ಏನೂ ಮಾಡೋಕ್ಕಾಗಲ್ಲ: ಬೈರತಿ ಸುರೇಶ್
Advertisement
Advertisement
ಸೇವೆಗಳನ್ನು ವಿಸ್ತರಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಅಂಚೆ ಇಲಾಖೆಯು ಈ ನಿರ್ಣಯವನ್ನು ನನಸಾಗಿಸಲು ಬದ್ಧವಾಗಿದೆ ಎಂದರು.
Advertisement
ದೇಶಾದ್ಯಂತ 6,000 ಅಂಚೆ ಕಚೇರಿಗಳನ್ನು ತೆರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Advertisement