ಕ್ಯಾನ್ಬೆರಾ: 2023ರ ಏಕದಿನ ವಿಶ್ವಕಪ್ (World Cup) ಟೂರ್ನಿಗೆ ಆಸ್ಟ್ರೇಲಿಯಾ (Australia) ಬಲಿಷ್ಠ ತಂಡ ಪ್ರಕಟಿಸಿದೆ. ಈ ಬಾರಿ ಭಾರತದ ಪೂರ್ಣಾತಿಥ್ಯದಲ್ಲಿ ಆಯೋಜನೆಗೊಂಡಿರುವ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ದೇಶದ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿದೆ.
Presenting your 18-player squad for the 2023 ODI World Cup, as well as two lead-in series against South Africa and India! ???????????? pic.twitter.com/h6jVWYJvMy
— Cricket Australia (@CricketAus) August 7, 2023
Advertisement
ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡ ಪ್ಯಾಟ್ ಕಮ್ಮಿನ್ಸ್ (Pat Cummins) ನಾಯಕತ್ವದಲ್ಲಿ 18 ಸದಸ್ಯರ ಬಲಿಷ್ಠ ತಂಡವನ್ನ ಪ್ರಕಟಿಸಿದೆ. ಆದ್ರೆ ನಾಯಕ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ತಂಡದಿಂದ ಹೊರಗುಳಿದಿದ್ದು, ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ICC WorldCup 2023: ಪಾಕಿಸ್ತಾನ ತಂಡ ಭಾರತಕ್ಕೆ ಬರೋದು ಫಿಕ್ಸ್
Advertisement
Advertisement
ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಹೀಗಿದೆ:
ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೇನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಆಡಂ ಝಂಪಾ.
Advertisement
ಟಿ20 ನಾಯಕತ್ವದಲ್ಲಿ ಬದಲಾವಣೆ:
ಇನ್ನೂ 2024ರ ಟಿ20 ವಿಶ್ವಕಪ್ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಆಸ್ಟ್ರೇಲಿಯಾ ಟಿ20 ನಾಯಕತ್ವ ಬದಲಾವಣೆ ಮಾಡಿದೆ. ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್‌ಗೆ (Mitchell Marsh) ಟಿ20 ತಂಡದ ನಾಯಕತ್ವ ನೀಡಲಾಗಿದೆ. ಇದೇ ಆಗಸ್ಟ್ 30 ರಿಂದ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ, 5 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿಗೆ ಟಿ20 ಹಾಗೂ ಏಕದಿನ ತಂಡವನ್ನೂ ಪ್ರಕಟಿಸಿದ್ದು, ಮಿಚೆಲ್ ಮಾರ್ಚ್‌ಗೆ ಟಿ20 ತಂಡದ ನಾಯತ್ವ ಜವಾಬ್ದಾರಿ ನೀಡಲಾಗಿದೆ.
ಇದುವರೆಗೆ 46 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಮಿಚೆಲ್ ಮಾರ್ಷ್, 1,086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ ಬ್ಯಾಟಿಂಗ್ನಲ್ಲಿ ಅಬ್ಬರಿಸಿರುವ ಮಾರ್ಷ್ 6 ಅರ್ಧಶತಕ ಸಿಡಿಸಿದ್ದಾರೆ. ಇದರಲ್ಲಿ 86 ಬೌಂಡರಿಗಳು ಹಾಗೂ 45 ಸಿಕ್ಸರ್‌ಗಳು ಸೇರಿವೆ. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್, ಬೌಂಡರಿ ಸಿಡಿಸಿ ಗೆದ್ದ ವಿಂಡೀಸ್ – ಭಾರತಕ್ಕೆ ವಿರೋಚಿತ ಸೋಲು
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಆಸೀಸ್ ತಂಡ:
ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್.
ಏಕದಿನ ಪಂದ್ಯಗಳು:
ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಂ ಝಂಪಾ.
Web Stories