ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಹಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಅವರ ಪತ್ನಿ ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ.
ಜುಲೈ 11ರಂದು ಖಚಿತ ಮಾಹಿತಿ ಮೇರೆಗೆ ಬಿಹಾರದ ನಯಾ ಟೋಲಾ ಪ್ರದೇಶದಲ್ಲಿ ದಾಳಿ ನಡೆಸಿ ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಶಂಕಿತ ಭಯೋತ್ಪಾದಕರಿಂದ ಪಿಎಫ್‍ಐ ಕರಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಜುಲೈ 12ರ ಪಾಟ್ನಾ ಪ್ರವಾಸದ ವೇಳೆ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಇದಕ್ಕಾಗಿ ಆರೋಪಿಗಳು ಜುಲೈ 6 ಮತ್ತು 7ರಂದು ಪೂರ್ವಭಾವಿ ಸಭೆಗಳನ್ನು ನಡೆಸಿದ್ದರು. 2047ಕ್ಕೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಜಾರಿ ಮಾಡುವುದು ಈ ತಂಡದ ಗುರಿಯಾಗಿತ್ತು.
Advertisement
ಪಾಟ್ನಾದ ಫುಲ್ವಾರಿ ಷರೀಫ್‍ನಲ್ಲಿ ಸಂಘಟನೆಯ ಘಟಕ ಹೊಂದಿತ್ತು. ಈ ಘಟಕಕ್ಕೆ ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಇತರ ಹಲವು ರಾಜ್ಯಗಳಿಂದ ಭಯೋತ್ಪಾದಕ ಸಂಚು ರೂಪಿಸಲು ತರಬೇತಿ ಪಡೆಯಲು ಯುವಕರು ಬರುತ್ತಿದ್ದರು.
Advertisement
ಬಂಧಿತ ದಂಪತಿ ಪಾಕಿಸ್ತಾನ, ಬಾಂಗ್ಲಾದೇಶ, ಟರ್ಕಿ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಿಂದ ದೇಶವಿರೋಧಿ ಅಭಿಯಾನ ನಡೆಸಲು ಹಣ ಪಡೆಯುತ್ತಿದ್ದರು, PFIಯೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಜಲಾವುದ್ದೀನ್ ಈ ಹಿಂದೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (SIMI)ದೊಂದಿಗೆ ಸಂಬಂಧ ಹೊಂದಿದ್ದರು.
ಸ್ಥಳೀಯರಿಗೆ ಕತ್ತಿ ಮತ್ತು ಚಾಕುಗಳನ್ನು ಹೇಗೆ ಬಳಸಬೇಕೆಂದು ಕಲಿಸುತ್ತಿದ್ದರು ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದರು. ಬಂಧಿತರಿಂದ ಇಸ್ಲಾಮಿಕ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಹಲವಾರು ದಾಖಲೆಗಳನ್ನು ವಶಪಡಿಸಲಾಗಿದೆ ಎಂದು ಎಎಸ್‍ಪಿ ತಿಳಿಸಿದ್ದಾರೆ. ಇದನ್ನೂ ಓದಿ: ನೆಲಮಂಗಲದ ಗೋವಿಂದಪುರ ಗ್ರಾಮದ ಯುವಕರಿಗಿಲ್ಲ ಮದುವೆ ಭಾಗ್ಯ!
2001-02ರಲ್ಲಿ ಸಿಮಿ ಸಂಘಟನೆ ನಿಷೇಧದ ನಂತರ ಬಿಹಾರದಲ್ಲಿ ಹಲವಾರು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಪರ್ವೇಜ್ ಅವರ ಕಿರಿಯ ಸೋದರ ಜೈಲು ಪಾಲಾಗಿದ್ದರು ಎಂದು ಎಎಸ್‍ಪಿ ಮನೀಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಪ್ರವಾಸೋದ್ಯಮ ಇಲಾಖೆಗೆ ಟ್ವೀಟ್‌ನಲ್ಲೇ ಉತ್ತರಿಸುತ್ತೇವೆ: ಆನಂದ್ ಸಿಂಗ್