ಅಸ್ಸಾಂ ಗುವಾಹಟಿಯಲ್ಲಿ `ಪಠಾಣ್’ (Pathaan) ಸಿನಿಮಾ ವಿರುದ್ಧ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. `ಪಠಾಣ್’ ಚಿತ್ರಕ್ಕೆ ತೊಂದರೆಯಾಗುತ್ತಿರುವ ಬೆನ್ನಲ್ಲೇ ಅಸ್ಸಾಂ ಸಿಎಂಗೆ (Assam Cm) ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಫೋನ್ ಕಾಲ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಹಿಂದಿ ಸಿನಿಮಾಗಳ ಬಗ್ಗೆ ಟೀಕೆ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ (Naredra Modi) ಅವರು ತಿಳಿಸಿದ್ದರು. ಈ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಆದೇಶ ನೀಡಿದ್ದರು. ಈ ಬೆನ್ನಲ್ಲೇ ಗುವಾಹಟಿಯಲ್ಲಿ `ಪಠಾಣ್’ ಸಿನಿಮಾಗೆ ತೊಂದರೆಯಾಗಿದೆ. ಶಾರುಖ್ ಚಿತ್ರದ ವಿರುದ್ಧ ಹಿಂದೂ ಪರ ಸಂಘಟನೆಗಳು ನಿಂತಿದ್ದಾರೆ. ಚಿತ್ರದ ಪೋಸ್ಟರ್‌ಗಳನ್ನ ಹರಿದು ಹಾಕಿದ್ದಾರೆ. ಗುವಾಹಟಿಯಲ್ಲಿ ನಡೆಯುತ್ತಿರುವ ಬೆಳವಣಿಗೆ ನೋಡಿ ಅಸ್ಸಾಂ ಸಿಎಂ ಬಳಿ ಶಾರುಖ್ ಫೋನ್ ಕಾಲ್ ಮೂಲಕ ಮಾತನಾಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಸಿಎಂ ಹಿಮಂತ್ ಬಿಸ್ವ (Himanta Biswa) ಖಚಿತಪಡಿಸಿದ್ದಾರೆ. ಇದನ್ನೂ ಓದಿ: `ಕೆಜಿಎಫ್ 2′ ನಟಿ ರವೀನಾ ಟಂಡನ್ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ
Advertisement
Advertisement
ಬಾಲಿವುಡ್ ನಟ ಶಾರುಖ್ ಖಾನ್ ಬೆಳಿಗ್ಗೆ 2 ಗಂಟೆಗೆ ಕರೆ ಮಾಡಿದ್ದರು. ಪಠಾಣ್ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಗುವಾಹಟಿಯಲ್ಲಿ ಘಟನೆ ಬಗ್ಗೆ ನಟ ಆತಂಕ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಹೊಣೆಯಾಗಿದೆ. ಇಂಥ ಅಹಿತಕರ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಸ್ಸಾಮ್ ಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
Bollywood actor Shri @iamsrk called me and we talked today morning at 2 am. He expressed concern about an incident in Guwahati during screening of his film. I assured him that it’s duty of state govt to maintain law & order. We’ll enquire and ensure no such untoward incidents.
— Himanta Biswa Sarma (@himantabiswa) January 22, 2023
Advertisement
ಇತ್ತೀಚೆಗೆ ಶಾರುಖ್ ಖಾನ್ ಕರೆ ಮಾಡುವ ಮೊದಲೇ, ಶಾರುಖ್ ಖಾನ್ ಎಂದರೆ ಯಾರು ಎಂದು ಅಸ್ಸಾಂ ಸಿಎಂ ಪ್ರಶ್ನೆ ಮಾಡಿದ್ದರು. ʻಪಠಾಣ್ʼ ಸಿನಿಮಾ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆ ಅಚ್ಚರಿಯ ಉತ್ತರ ನೀಡಿದ್ದರು. ಶಾರುಖ್ ಆಗಲಿ, ಅವರ ಸಿನಿಮಾಗಳ ಬಗ್ಗೆಯಾಗಲಿ ನನಗೇನು ಗೊತ್ತಿಲ್ಲ ಎಂದು ಸಿಎಂ ಉತ್ತರಿಸಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k