ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಪಠಾಣ್ (Pathan) ಸಿನಿಮಾ ಇಂದಿಗೆ ಐವತ್ತು ದಿನಗಳನ್ನು ಪೂರೈಸಿದೆ. ಬೈಕಾಟ್, ವಿರೋಧ, ಹೋರಾಟ, ಕಾನೂನು ಸಮರ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಎಲ್ಲ ವಿರೋಧಗಳ ಮಧ್ಯಯೇ ಭರ್ಜರಿ ಯಶಸ್ಸು ಸಾಧಿಸಿದೆ. ಅಲ್ಲದೇ ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ.
Advertisement
50 ದಿನಗಳನ್ನೂ ಪಠಾಣ್ ಸಿನಿಮಾ ಪೂರೈಸಿದ್ದರೂ, ಇನ್ನೂ 20 ದೇಶಗಳಲ್ಲಿ ಈ ಸಿನಿಮಾ ತನ್ನ ಪ್ರದರ್ಶನವನ್ನು ಮುಂದುವರೆಸಿದೆ. ಭಾರತದಲ್ಲೇ 135 ಚಿತ್ರಮಂದಿರಗಳಲ್ಲಿ 800 ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಎರಡ್ಮೂರು ವರ್ಷಗಳಲ್ಲಿ ಈ ಪ್ರಮಾಣದಲ್ಲಿ ಗೆದ್ದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಠಾಣ್ ಪಾತ್ರವಾಗಿದೆ. ಐಸಿಯುವಿನಲ್ಲಿದ್ದ ಬಾಲಿವುಡ್ ಗೆ ಈ ಸಿನಿಮಾದಿಂದ ಮರುಜೀವ ಬಂದಿದೆ. ಇದನ್ನೂ ಓದಿ: ಕ್ರಿಕೆಟರ್ ಶುಭಮನ್ ಗಿಲ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ರಶ್ಮಿಕಾ ಮಂದಣ್ಣ
Advertisement
Advertisement
ಬಾಕ್ಸ್ ಆಫೀಸಿನ ಅನೇಕ ದಾಖಲೆಗಳನ್ನು ಪಠಾಣ್ ಮುರಿದಿದೆ. ಅತೀ ಕಡಿಮೆ ಸಮಯದಲ್ಲೇ ಸಾವಿರ ಕೋಟಿ ಸಂಪಾದನೆ ಮಾಡಿದ ಬಾಲಿವುಡ್ ಸಿನಿಮಾ ಎನ್ನುವ ಖ್ಯಾತಿಯೂ ಅದು ಪಾತ್ರವಾಗಿದೆ. ಅಲ್ಲದೇ, ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಮೂಲಕ ಏಕಕಾಲದಲ್ಲಿ ದೇಶ ವಿದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನು ಚಿತ್ರಕಂಡಿದೆ.
Advertisement
ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ಟೀಕೆಗೆ ಪಠಾಣ್ ಗುರಿ ಆಯಿತು. ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಪ್ರತಿಭಟನೆ ಕೂಡ ನಡೆಯಿತು. ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ಸಿನಿಮಾವನ್ನು ಬ್ಯಾನ್ ಮಾಡುವ ವಿಚಾರ ಮುನ್ನೆಲೆಗೆ ಬಂತು. ಈ ಸಿನಿಮಾದ ಬಗ್ಗೆ ಏನೂ ಮಾತನಾಡಬಾರದು ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಕರೆಕೊಟ್ಟಿದ್ದರು. ಆದರೂ, ಪ್ರತಿಭಟನೆ ನಿಲ್ಲಲಿಲ್ಲ. ಸಿನಿಮಾ ಗೆಲ್ಲುವುದು ಮಾತ್ರ ಬಿಡಲಿಲ್ಲ.