ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಅಮಿತ್ ಮಿಶ್ರಾ ಅವರ ನಡುವೆ ನೆನ್ನೆಯಿಂದಲೂ ಟ್ವೀಟ್ ವಾರ್ ನಡೆಯುತ್ತಿದ್ದು, ಇಂದೂ ಸಹ ಟಾಪ್ ಟ್ರೆಂಡಿಗ್ ಟ್ವೀಟ್ ಆಗಿದೆ.
ನೆನ್ನೆ ಅಮಿತ್ ಮಿಶ್ರಾ ಅವರು ಮಾಡಿದ್ದ ಟ್ವೀಟ್‌ಗೆ ಮತ್ತೆ ತಿರುಗೇಟು ನೀಡಿರುವ ಇರ್ಫಾನ್ ಪಠಾಣ್ ತಮ್ಮ ಟ್ವೀಟ್‌ನಲ್ಲಿ, ನಾನು ಭಾರತದ ಸಂವಿಧಾನವನ್ನು ಯಾವಾಗಲೂ ಅನುಸರಿಸುತ್ತೇನೆ. ನಮ್ಮ ಸುಂದರ ದೇಶದ ಪ್ರತಿಯೊಬ್ಬ ನಾಗರಿಕನೂ ಇದನ್ನು ಅನುಸರಿಸಬೇಕು ಎಂದು ಒತ್ತಾಯಿಸುತ್ತೇನೆ. ದಯವಿಟ್ಟು ಓದಿ ಮತ್ತೆ ಓದಿ… ಎಂದು ಹೇಳಿದ್ದಾರೆ. ಇದರೊಂದಿಗೆ ಭಾರತ ಸಂವಿಧಾನದ ಪೀಠಿಕೆಯ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಪಠಾಣ್ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…
Advertisement
Advertisement
ಟ್ವೀಟ್ ವಾರ್‌ನ ಅಸಲಿ ಗುಟ್ಟೇನು?: ಭಾರತದ ವೇಗದ ಬೌಲರ್ ಆಗಿದ್ದ ಇರ್ಫಾನ್ ಪಠಾಣ್ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ…..’ ಎಂದು ಬರೆದು ಟ್ವೀಟ್ ಮಾಡಿದ್ದರು.
Advertisement
ಈ ಟ್ವೀಟ್‌ಗೆ ಟಾಂಗ್ ಕೊಡುವಂತೆ ಮಾಜಿ ಬಲಗೈ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ. ನಮ್ಮ ಸಂವಿಧಾನವೇ ನಮ್ಮ ಮೊದಲ ಗ್ರಂಥ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ’ ಎಂದು ಬರೆದಿದ್ದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್
Advertisement
Always followed this and I urge each citizen of our beautiful country to follow this. Please read and re-read… ???????? pic.twitter.com/Vjhf6k3UaK
— Irfan Pathan (@IrfanPathan) April 23, 2022
ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್ ಪಠಾಣ್ ಸರಿಯಾದ ಟ್ವೀಟ್ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಅಮಿತ್ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ. ಭಾರತದಲ್ಲಿ ಸಂವಿಧಾನವೇ ಮೊದಲಾಗಬೇಕೆ ಹೊರತು, ಧರ್ಮ ಗ್ರಂಥವಲ್ಲ. ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್ ಬೌಲ್ಡ್ ಆಗಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.