ಚಂಡೀಗಢ: ಪಂಜಾಬ್‌ನ ಪಟಿಯಾಲದಲ್ಲಿ ಶುಕ್ರವಾರ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹಾಗೂ ಸಂಚುಕೋರ ಬರ್ಜಿಂದರ್ ಸಿಂಗ್ ಪರ್ವಾನಾನನ್ನು ಮೊಹಾಲಿಯಲ್ಲಿ ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ.
Advertisement
ಆರೋಪಿ ಬರ್ಜಿಂದರ್ ಸಿಂಗ್‌ನನ್ನು ಮುಂಬೈನಿಂದ ವಿಮಾನದ ಮೂಲಕ ಮೊಹಾಲಿ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7:20ಕ್ಕೆ ಕರೆತರಲಾಗಿತ್ತು. ಇನ್‌ಸ್ಪೆಕ್ಟರ್ ಶಮೀಂದರ್ ಸಿಂಗ್ ನೇತೃತ್ವದ ಕೇಂದ್ರೀಯ ಗುಪ್ತಚರ ಸಂಸ್ಥೆ(ಸಿಐಎ) ಪಟಿಯಾಲ ತಂಡ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬರ್ಜಿಂದರ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ದೇಶದಲ್ಲಿ ಅಗತ್ಯವಿಲ್ಲ: ಓವೈಸಿ
Advertisement
ಶುಕ್ರವಾರ ಪಟಿಯಾಲದ ಕಾಳೀ ದೇವಿ ಮಂದಿರದ ಮುಂಭಾಗ ಶಿವಸೇನೆ ಹಾಗೂ ಖಲಿಸ್ತಾನಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಹಿಂಸಾಚಾರದ ವೇಳೆ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದರು.
Advertisement
Advertisement
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 4 ಆರೋಪಿಗಳನ್ನು ಬಂಧಿಸಿದ್ದಾರೆ. ಹರೀಶ್ ಸಿಂಗ್ಲಾ, ಕುಲ್ದೀಪ್ ಸಿಂಗ್, ದಲ್ಜಿತ್ ಸಿಂಗ್ ಹಾಗೂ ಬರ್ಜಿಂದರ್ ಸಿಂಗ್ ಪರ್ವಾನಾ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇನ್ನೊಬ್ಬಳನ್ನು ಮನೆಗೆ ಕರೆತರಲು ಯಾವ ಮುಸ್ಲಿಂ ಮಹಿಳೆಯೂ ಬಯಸಲ್ಲ: ಅಸ್ಸಾಂ ಸಿಎಂ