ರಾಜಕೀಯದಲ್ಲಿ ತಾಳ್ಮೆ ಮುಖ್ಯ – ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಯಿಲ್ಲ: ಲಕ್ಷ್ಮಣ ಸವದಿ

Public TV
1 Min Read
Laxman Savadi 1

ಚಿಕ್ಕೋಡಿ: ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ (Laxman Savadi) ಹೇಳಿದ್ದಾರೆ.

ಅಥಣಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಸವದಿ, ನಿರೀಕ್ಷೆ ಯಾರಿಗೆ ಇರಲ್ಲ, ಎಲ್ಲರಿಗೂ ಸಹ ನಿರೀಕ್ಷೆ ಇದ್ದೇ ಇರುತ್ತದೆ. ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ಬಳಿಕ ಸಿಎಂ ಆಗಬೇಕು ಎಂದು ನಿರೀಕ್ಷೆ ಇಟ್ಟಿರುತ್ತಾರೆ. ಆಸೆಗಳಿಗೆ ಕೊನೆ ಯಾವತ್ತೂ ಇರುವುದಿಲ್ಲ. ಅದು ಮನುಷ್ಯನ ಸ್ವಾಭಾವಿಕ ಮನಸ್ಥಿತಿ ಎಂದರು.

Laxman Savadi 1 2

ಎರಡೂವರೆ ವರ್ಷ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಸಿದ್ದರಾಮಯ್ಯ ಅವರನ್ನೇ ಕೇಳಬೇಕು. ಹೈಕಮಾಂಡ್‌ನಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು 4 ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗಪಡಿಸಿಲ್ಲ. ಹೊರಗಡೆ ಕೇವಲ ಊಹಾಪೋಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡ್ತೇವೆ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿರುವ ಕುರಿತು ಮಾತನಾಡಿದ ಅವರು, ಮೊದಲು ಸರ್ವೆ ಕಾರ್ಯ ಮುಗಿಯಲಿ. ಸರ್ವೆ ಆದ ಮೇಲೆ ಗೈಡ್‌ಲೈನ್ಸ್ ಬರುತ್ತದೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತದೆ ಎಂದು ಮಾಜಿ ಡಿಸಿಎಂ ಸವದಿ ಹೇಳಿದ್ದಾರೆ. ಇದನ್ನೂ ಓದಿ: ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಕೆಶಿ

Share This Article