ಕೋಲ್ಕತ್ತಾ: ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ (Operation Theatre) ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಆಸ್ಪತ್ರೆ (Hospital) ಸಿಬ್ಬಂದಿಯೊಬ್ಬ ಆಕೆಯ ಖಾಸಗಿ ಭಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿ ಫೂಲ್ಬಗಾನ್ ಪೊಲೀಸರಿಗೆ (Police) ದೂರು ನೀಡಿದ್ದಾರೆ.
Advertisement
ಕೋಲ್ಕತ್ತಾ (Kolkata) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಆಪರೇಷನ್ ಥಿಯೇಟರ್ಗೆ ವರ್ಗಾಯಿಸಿ ಅರಿವಳಿಕೆ ನೀಡಿದ್ದಾರೆ. 11 ಗಂಟೆಗೆ ವೇಳೆಗೆಲ್ಲಾ ಶಸ್ತçಚಿಕಿತ್ಸೆ ಮುಗಿದಿದೆ. ಬಳಿಕ ಮಹಿಳೆ ಅರೆ ಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಯಾರೋ ತನ್ನ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿರುವುದಾಗಿ ಮಹಿಳೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್ಗೆ ಷರತ್ತುಬದ್ಧ ಜಾಮೀನು
Advertisement
Advertisement
ಮಹಿಳೆ ಹೇಳಿದ್ದೇನು?
ನಾನು ನಿಧಾನವಾಗಿ ಪ್ರಜ್ಞಾವಸ್ಥೆಗೆ ಬರುತ್ತಿದ್ದೆ. ಈ ವೇಳೆ ಸ್ವಲ್ಪವೇ ಕಣ್ಣು ತೆರೆದು ನೋಡಿದಾಗ ನನ್ನ ಬಲಭಾಗದಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ. ಅವನು ನನ್ನನ್ನು ತಬ್ಬಿಕೊಳ್ಳುತ್ತಿದ್ದ. ನನಗೆ ತುಂಬಾ ನೋವಾಗುತ್ತಿತ್ತು. ನನಗೆ ಅರಿವಳಿಕೆ ನೀಡಿದ್ದರಿಂದ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೆ ನನಗೆ ಪ್ರಜ್ಞೆ ಬಂದು ನೋಡಿದಾಗ ನನ್ನ ಖಾಸಗಿ ಭಾಗಗಳಲ್ಲಿ ಆಗಿದ್ದ ಗುರುತುಗಳನ್ನು ಗಮನಿಸಿದೆ ಎಂದು ಹೇಳಿದ್ದಾರೆ.
Advertisement
ಆಪರೇಷನ್ ಥಿಯೇಟರ್ನಲ್ಲಿ ನನಗೆ ಏನಾಯಿತು ಅನ್ನೋದು ಸಂಪೂರ್ಣವಾಗಿ ತಿಳಿದಿಲ್ಲ. ಆದ್ರೆ ಅಪರಾಧ ನಡೆಯುವಾಗ ಯಾರೊಬ್ಬರೂ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದ್ರೆ ನನ್ನ ಬಲ ಎದೆಯ ಮೇಲೆ ಗುರುತುಗಳು ಕಂಡುಬಂದಿವೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ
ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದು, ಮೆಡಿಕಲ್ ರಿಪೋರ್ಟ್ಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k