ದಾವಣಗೆರೆ: ಕರ್ತವ್ಯ ನಿರತ ಸರ್ಕಾರಿ ವೈದ್ಯರೊಬ್ಬರ ಕೊರಳಪಟ್ಟಿ ಹಿಡಿದು ಎಳೆದಾಡಿ, ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ತಮ್ಮ ಪುತ್ರನಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿ ವೈದ್ಯ ಮಲ್ಲಪ್ಪ ಅವರ ಮೇಲೆ ಜಗಳೂರು ನಿವಾಸಿಗಳಾದ ಸುನಿಲ್ ಎಂಬವರು ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಸುನಿಲ್‍ಗೆ ಆತನ ಸಂಬಂಧಿ ಸೋಮಶೇಖರ್ ಕೂಡ ಸಾಥ್ ನೀಡಿದ್ದಾನೆ. ಇಬ್ಬರು ಸೇರಿ ಮಲ್ಲಪ್ಪ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದಾರೆ. ತಕ್ಷಣವೇ ಮಧ್ಯ ಪ್ರವೇಶಿಸಿದ ಸ್ಥಳೀಯರು ಹಲ್ಲೆಯನ್ನು ತಡೆದಿದ್ದಾರೆ.
ಈ ಘಟನೆಯು ಜನವರಿ 9ರಂದು ನಡೆದಿದ್ದು, ವೈದ್ಯರ ಮೇಲೆ ಆರೋಪಿಗಳು ಹಲ್ಲೆ ಮಾಡುತ್ತಿರುವ ದೃಶ್ಯ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಮ್ಮ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ವೈದ್ಯ ಮಲ್ಲಪ್ಪ ಅವರು ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv