ಬೆಂಗಳೂರು: ಐಸಿಸ್ (ISIS) ಮಾದರಿಯ ಉಗ್ರಗಾಮಿಗಳನ್ನು ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್‌ಐ (PFI) ಹಾಗೂ ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (C.T Ravi) ಸರ್ಕಾರವನ್ನು ಅಭಿನಂದಿಸಿದ್ದಾರೆ.
ಪಿಎಫ್‌ಐ ಬ್ಯಾನ್ (PFI Ban) ಹಿನ್ನೆಲೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ, ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಇನ್ನು ಸಮಾಜದ ಸರದಿ. ಸರ್ಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆಯಾದರೂ ಇಷ್ಟು ಸಾಕಾಗುವುದಿಲ್ಲ. ಸಮಾಜ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.
Advertisement
Advertisement
ಹೇಳಿಕೆಯಲ್ಲಿ ಏನಿದೆ?
ವಿದ್ರೋಹಿ ಹಾಗೂ ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀರಣ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು. ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರೂ, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ. ಇದನ್ನೂ ಓದಿ: PFI ಬ್ಯಾನ್ – ‘ಕೈ’ ಪಾಳಯದಲ್ಲಿ ನಡುಕ, ಆಕ್ಷನ್ ಪ್ಲಾನ್‍ಗೆ ಸಿದ್ಧತೆ!
Advertisement
ದೇಶದ ಭದ್ರತೆ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯವಿದೆ. ರಾಷ್ಟ್ರ ವಿರೋಧಿ ಹಾಗೂ ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ.
Advertisement
ನಿಷೇಧದ ನಂತರ ಪಿಎಫ್‌ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇಂತಹ ಯಾವುದೇ ಚಟುವಟಿಕೆಗಳು ಗಮನಕ್ಕೆ ಬಂದರೆ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮುಂದೆ ನಡೆಯಬಹುದಾದಂತಹ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಿ ಎಂದು ಸಿಟಿ ರವಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ – ಗುಪ್ತಚರ ಇಲಾಖೆ ಸೂಚನೆ ಏನು?