– ಗಾಯಾಳುಗಳಿಗೆ ಶ್ರೀರಾಮುಲು ವೈಯಕ್ತಿಕವಾಗಿ 50 ಸಾವಿರ ಘೋಷಣೆ
ತುಮಕೂರು: ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 6 ಜನ ಮೃತಪಟ್ಟಿರುವ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.
Advertisement
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿ 6 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿತ್ತು. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀರಾಮುಲು ಮೃತರಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಶ್ರೀರಾಮುಲು ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು
Advertisement
Advertisement
ಅಪಘಾತದ ಕುರಿತಾಗಿ ಆರ್.ಟಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಬಳಿಕ ಪಾವಗಡದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಪಾವಗಡ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ
Advertisement
"ಇಂದು ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿಬಸ್ ಅಪಘಾತದಲ್ಲಿ 8 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖವಾಗಿದೆ.
ತುಮಕೂರು ಜಿಲ್ಲಾಡಳಿತದ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಸೇರಿದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲು ಸೂಚಿಸಲಾಗಿದೆ":CM @BSBommai
— CM of Karnataka (@CMofKarnataka) March 19, 2022
ಅಪಘಾತವಾಗಿದ್ದು ಹೇಗೆ?
ಇಂದು ಬೆಳಗ್ಗೆ ಶ್ರೀನಿವಾಸ್ ಮೂರ್ತಿ ಒಡೆತನದ ಎಸ್.ವಿ.ಟಿ. ಎಂಬ ಖಾಸಗಿ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಪಾವಗಡದ ರಸ್ತೆ ಮೇಲೆ, ಬೇಲಿ ಮೇಲೆಯೂ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.