ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರನ್ನ(Pavitra Gowda) ಪರಪ್ಪನ ಅಗ್ರಹಾರ ಜೈಲಿನಲ್ಲಿ ಐವರು ಸಜಾಬಂಧಿಗಳು (Renukaswmy Case) ಇರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ.
ಸೆಷನ್ಸ್ ಕೋರ್ಟ್ ಸೂಚನೆಯಂತೆ ಜೈಲಾಧಿಕಾರಿಗಳು ಈ ವ್ಯವಸ್ಥೆ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪವಿತ್ರಾಗೌಡರನ್ನು ಹಲವು ಸಜಾಬಂಧಿಗಳು ಇರುವ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು.
ಈ ಬ್ಯಾರಕ್‌ನಲ್ಲಿ ಹಲವು ಅಪರಾಧಿಗಳೊಂದಿಗೆ ಒಂದೇ ಶೌಚಾಲಯ ಬಳಸಬೇಕಾಗಿದೆ. ಅಲ್ಲದೆ, ಇನ್ಸ್‌ಪೆಕ್ಷನ್ ನಡೆಯುತ್ತಿರುವುದರಿಂದ ಕೈದಿಗಳು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸೌಲಭ್ಯ ಹಾಗೂ ಸ್ವಚ್ಛತೆ ಇರುವ ಬ್ಯಾರಕ್‌ಗೆ ವರ್ಗಾವಣೆ ಮಾಡುವಂತೆ ಪವಿತ್ರಾ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.ಇದನ್ನೂ ಓದಿ: ಕೊಡಗಿನ ಆನೆಕಾಡು ಬಳಿ ಭೀಕರ ಅಪಘಾತ – ಮೂವರು ಸಾವು
ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಸೌಲಭ್ಯ ಇರುವ ಬ್ಯಾರಕ್‌ಗೆ ವರ್ಗಾವಣೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು. ಜೈಲು ಮ್ಯಾನ್ಯುವಲ್ ಪ್ರಕಾರ ಇದೀಗ ಐವರು ಸಜಾಬಂಧಿಗಳು ಇರುವ ಬ್ಯಾರಕ್‌ಗೆ ಪವಿತ್ರಾ ಗೌಡ ಅವರನ್ನು ಶಿಫ್ಟ್ ಮಾಡಲಾಗಿದೆ.
ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ
ಇನ್ನು ಪವಿತ್ರಾ ಗೌಡಗೆ ಇಂದು ಜಾಮೀನು ಸಿಗುತ್ತಾ ಎಂಬ ಕುತೂಹಲ ಮೂಡಿದೆ. ಸಿಸಿಎಚ್ 59ರ ಕೋರ್ಟ್‌ನಲ್ಲಿ ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: AI ಮನುಷ್ಯನನ್ನೇ ಕೊಲ್ಲುವ ಮಟ್ಟಕ್ಕೆ ಅಪಾಯಕಾರಿಯಾಗಬಹುದಾ?
ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಜೊತೆಗೆ ಮತ್ತಿಬ್ಬರ ಆರೋಪಿಗಳ ಜಾಮೀನು ಅರ್ಜಿಯೂ ವಿಚಾರಣೆಗೆ ಬರಲಿದೆ.

