ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣ ಸಂಬಂಧ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಿದ್ದಾರೆ. ಈ ಬೆನ್ನಲ್ಲೇ ತಲಘಟ್ಟಪುಪುರದ ವಜ್ರ ಮುನೇಶ್ವರ ದೇವಸ್ಥಾನಕ್ಕೆ ತಾಯಿ ಜೊತೆ ನಟಿ ಭೇಟಿ ನೀಡಿದ್ದಾರೆ. ಈ ವೇಳೆ, ದರ್ಶನ್ ಹೆಸರಲ್ಲಿ ಪವಿತ್ರಾ ತಾಯಿ ಅರ್ಚನೆ ಮಾಡಿಸಿದ್ದಾರೆ.
Advertisement
6 ತಿಂಗಳ ಬಳಿಕ ಜೈಲಿನಿಂದ ರಿಲೀಸ್ ಆಗ್ತಿದ್ದಂತೆ ಮನೆ ದೇವರ ಸನ್ನಿಧಿಗೆ ಪವಿತ್ರಾ ಕುಟುಂಬ ಭೇಟಿ ನೀಡಿದೆ. ಪೂಜೆ ಸಲ್ಲಿಸುವ ವೇಳೆ ಪವಿತ್ರಾರ ಸನ್ನೆ ಬಳಿಕ ದರ್ಶನ್ ಹೆಸರಲ್ಲಿ ತಾಯಿ ಭಾಗ್ಯ ಅರ್ಚನೆ ಮಾಡಿಸಿದ್ದಾರೆ. ಈ ವೇಳೆ, ದೇಗುಲದಲ್ಲಿ ನಟಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಜೈಲಧಿಕಾರಿಗಳ ಕೈಗೆ ತಡವಾಗಿ ತಲುಪಿದ ಜಾಮೀನು ಪ್ರತಿ – ಪವಿತ್ರಾ ಗೌಡಗೆ ಇಂದೂ ಜೈಲೇ ಗತಿ
Advertisement
Advertisement
ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಇದೀಗ ಆರ್‌ಆರ್ ನಗರದ ನಿವಾಸದತ್ತ ಪವಿತ್ರಾ ಕುಟುಂಬ ತೆರಳಿದ್ದಾರೆ. ಇದನ್ನೂ ಓದಿ:ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ