ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ಪವಿತ್ರಾ ಗೌಡ (Pavithra Gowda) ಇಂದು ಪರಪ್ಪನ ಅಗ್ರಹಾರದಿಂದ (Parappana Agrahara) ಬಿಡುಗಡೆಯಾಗಲಿದ್ದಾರೆ.
6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಭಾವಿ ಪತ್ನಿ ಜೊತೆ ಆಗಮಿಸಿ ಸಿಎಂಗೆ ಮೊದಲ ಮದುವೆ ಆಮಂತ್ರಣ ನೀಡಿದ ಡಾಲಿ
Advertisement
Advertisement
ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.
Advertisement
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
Advertisement
ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.