ಬೆಂಗಳೂರು: ಕೊಲೆ ಕೇಸ್‌ನಲ್ಲಿ ಜೈಲಿನಿಂದ ರಿಲೀಸ್ ಆದ ಬಳಿಕ ಪವಿತ್ರಾ ಗೌಡ (Pavithra Gowda) ಬಿಸಿನೆಸ್‌ನತ್ತ ಮುಖ ಮಾಡಿದ್ದಾರೆ. ಕಳೆದ ೮ ತಿಂಗಳಿಂದ ಮುಚ್ಚಿದ್ದ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು (Red Carpet Studio) ರೀಲಾಂಚ್ ಮಾಡಿದ್ದಾರೆ.
ನಟ ದರ್ಶನ್ (Darshan) ಗೆಳತಿ ಪವಿತ್ರಾ ಗೌಡ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಬಳಿಕ ವ್ಯವಹಾರಗಳತ್ತ ಗಮನ ಹರಿಸಿದ್ದಾರೆ. ಪವಿತ್ರಾ ಗೌಡ ರೆಡ್ ಕಾರ್ಪೆಟ್ ಸ್ಟುಡಿಯೋ ಪ್ರಾರಂಭಿಸಿದ್ದರು. ಕಳೆದ ಎಂಟು ತಿಂಗಳಿಂದ ಮುಚ್ಚಿದ್ದ ಸ್ಟುಡಿಯೋಗೆ ಇಂದು ಮರುಚಾಲನೆ ನೀಡಲಾಗಿದೆ. ಇದನ್ನೂ ಓದಿ: ನಮ್ಮ ಸುತ್ತ ಒಳ್ಳೆಯ ಸ್ನೇಹಿತರಿರೋದು ಮುಖ್ಯ: ಚರ್ಚೆಗೆ ಗ್ರಾಸವಾಯ್ತು ಪವಿತ್ರಾ ಗೌಡ ಪೋಸ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಜೈಲು ಸೇರಿದ್ದರು. ಜೈಲಿಗೆ ಹೋದ ಬಳಿಕ ಸ್ಟುಡಿಯೋ ಕ್ಲೋಸ್ ಆಗಿತ್ತು. ಪ್ರೇಮಿಗಳ ದಿನದ ಪ್ರಯುಕ್ತ ರೆಡ್ ಕಾರ್ಪೆಟ್ ಸ್ಟುಡಿಯೋ ರೀಲಾಂಚ್ ಮಾಡಿದ್ದಾರೆ. ಸ್ಟುಡಿಯೋಗೆ ಪವಿತ್ರಾ ಗೌಡ ರೇಂಜ್ ರೋವರ್ ಕಾರ್‌ನಲ್ಲಿ ಬಂದು ಗಮನ ಸೆಳೆದರು.
ಪವಿತ್ರಾ ಗೌಡ, ಸ್ಟುಡಿಯೋದಲ್ಲಿ ಗಣಹೋಮ, ಕಾರ್ಯಸಿದ್ಧಿ ಹೋಮ ಮಾಡಿಸಿದ್ದಾರೆ. ಈ ರೀಲಾಂಚ್ ಕಾರ್ಯಕ್ರಮಕ್ಕೆ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು: ಕಾಶಿಯಲ್ಲಿ ಪವಿತ್ರಾ ಗೌಡ