ತೆಲುಗು ನಟ ನರೇಶ್ (Naresh) ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ನಟನೆಯ ‘ಮತ್ತೆ ಮದುವೆ’ (Matte Maduve) ಸಿನಿಮಾದ ಮೊದಲ ಹಾಡು (Song) ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ‘ಉರುಳೋ ಕಾಲವೇ’ ಎಂಬ ಗಾನಲಹರಿ ಅನಾವರಣಗೊಂಡಿದೆ. ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿರುವ ಹಾಡಿಗೆ ಸಂತೋಷ್ ವೆಂಕಿ ದನಿಯಾಗಿದ್ದಾರೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಉರುಳೋ ಕಾಲವೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು (Raju M.S) ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ
ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ ತಿಂಗಳಲ್ಲಿ ಥಿಯೇಟರ್ ಅಂಗಳ ಪ್ರವೇಶಿಸಲಿದೆ.