ಕನ್ನಡದ ಹೆಸರಾಂತ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗಿನ ಖ್ಯಾತ ನಟ ನರೇಶ್ ‘ಮತ್ತೆ ಮದುವೆ’ ವಿಚಾರವನ್ನು ಹಂಚಿಕೊಂಡಿದ್ದಾರೆ. ನಾಳೆ 11.11ಕ್ಕೆ ಮತ್ತೆ ಮದುವೆಗೆ ಮಹೂರ್ತ ಫಿಕ್ಸ್ ಮಾಡಿದ್ದಾರೆ. ಈ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ಅವರು ‘ನಾಳೆ ಮತ್ತೆ ಮದುವೆಯ ಟೀಸರ್ ಬಿಡುಗಡೆಯಾಗಲಿದೆ. ಶುಭ ಹಾರೈಸಿ’ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ:ರೋಸಿ ಟೈಟಲ್ ವಿವಾದ : ಶಿವರಾಜ್ ಕುಮಾರ್ ಗೆ ಮನವಿ ಮಾಡಿದ ಯೋಗಿ
ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ. ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.
‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.
ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.