ಪವಿತ್ರಾ ಲೋಕೇಶ್-ನರೇಶ್: ಬಯಲಾಯ್ತು ಕಿಸ್ಸಿಂಗ್ ದೃಶ್ಯದ ಅಸಲಿ ಬಣ್ಣ

Public TV
2 Min Read
pavithra lokesh and naresh to ge

ಹೊಸ ವರ್ಷದ ಮೊದಲ ದಿನದಂದು ಕಿಸ್ಸಿಂಗ್(Kiss) ವಿಡಿಯೋವೊಂದನ್ನು ರಿಲೀಸ್ ಮಾಡಿ, ಮದುವೆ ವಿಚಾರವನ್ನು ಹಂಚಿಕೊಂಡಿದ್ದರು ನಟ ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh). ಈ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಇಬ್ಬರದ್ದೂ ಲವ್ವಿಡವ್ವಿ ಜೋರಾಗಿದ್ದ ಸಂದರ್ಭದಲ್ಲಿ ವಿಡಿಯೋ ರಿಲೀಸ್ ಆಗಿದ್ದರಿಂದ ಅದು ನಿಜವಾ ಅಥವಾ ಯಾವುದಾದರೂ ಸಿನಿಮಾದ ತುಣುಕಾ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

Pavitra lokesh

ತಮ್ಮದೇ ಲವ್ ಸ್ಟೋರಿಯನ್ನು ‘ಮತ್ತೆ ಮದುವೆ’ (Matte Maduve) ಎನ್ನುವ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಪವಿತ್ರಾ ಲೋಕೇಶ್ ಮತ್ತು ನರೇಶ್. ಆ ಸಿನಿಮಾದಲ್ಲಿ ಇಬ್ಬರೂ ಕಿಸ್ ಮಾಡಿದ್ದಾರೆ. ಆ ಸನ್ನಿವೇಶದ ಒಂದು ತುಣುಕನ್ನು ಅವರು ಹೊಸ ವರ್ಷದ ಸಂದರ್ಭದಲ್ಲಿ ಹಂಚಿಕೊಂಡು ವಿಶ್ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್ ನಲ್ಲಿ ಆ ವಿಡಿಯೋವನ್ನೂ ಸೇರಿಸಲಾಗಿದೆ. ಅಲ್ಲಿಗೆ ಸಿನಿಮಾದ ದೃಶ್ಯವೇ ಅದಾಗಿದೆ. ಇದನ್ನೂ ಓದಿ:ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪಿಕಾ ದಾಸ್

pavitra lokesh

ಚಿತ್ರದ ಟೀಸರ್ (Teaser) ಈಗಾಗಲೇ ರಿಲೀಸ್ ಆಗಿದ್ದು, ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ.

Pavitra Lokesh Matte maduve

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

pavitra lokesh

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬಂದಿದೆ.

Share This Article