ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ಇತ್ತೀಚೆಗಷ್ಟೇ ಪಿಎಚ್‌ಡಿ (Ph.D)ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ಕೊನೆಗೂ ಅದನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯನ್ನು ಅವರು ಬರೆದದ್ದು ಅದರಲ್ಲಿ ಪಾಸ್ ಕೂಡ ಆಗಿದ್ದಾರೆ.
- Advertisement -
ಹಂಪಿಯ (Hampi) ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿವಿಯಲ್ಲಿ 981 ಜನರು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ವಿವಿ ಪ್ರಕಟಿಸಿದೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ
- Advertisement -
- Advertisement -
ಕನ್ನಡ ವಿವಿ (Kannada University) ಕುಲಸಚಿವ ಡಾ.ಸುಬ್ಬಣ್ಣ ರೈ ಈ ಕುರಿತು ಮಾಹಿತಿ ನೀಡಿದ್ದು, ಪವಿತ್ರಾ ಲೋಕೇಶ್ ಭಾಷಾ ನಿಕಾಯದಡಿ ಪ್ರವೇಶ ಪರೀಕ್ಷೆ ಬರೆದಿದ್ದರು. ಬೆಳಗಾವಿ(Belgaum) ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು ಪವಿತ್ರ ಲೋಕೇಶ್. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.
- Advertisement -
ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತ ಕೇಂದ್ರ, ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
Web Stories