ಉಡುಪಿ: ಪ್ರಧಾನಿ ಮೋದಿ (PM Modi) ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ (Udupi Krishna Mutt) ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಭೇಟಿ ನೀಡಿದ್ದಾರೆ. ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಒಂದು ಗಂಟೆ ಮುಂಚೆಯೇ ಪವನ್ ಕಲ್ಯಾಣ್ ಆಗಮಿಸಿದರು. ಉಡುಪಿಯ ಊಟ ಸವಿದರು. ಬಳಿಕ ಕೃಷ್ಣ ಮಠದಲ್ಲಿ ಭಾಗವಹಿಸಿದರು. ಇದನ್ನೂ ಓದಿ: ಉಡುಪಿ ಕೃಷ್ಣಮಠದ ಗೀತೋತ್ಸವಕ್ಕೆ ಆಗಮಿಸಿದ ಪವನ್ ಕಲ್ಯಾಣ್
ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೃಷ್ಣ ಮಠದ ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಬಳಿಕ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಸುವರ್ಣ ತೀರ್ಥಮಂಟಪದಲ್ಲಿ ಕೂತು ಪ್ರಸಾದ ಸ್ವೀಕರಿಸಿದರು. ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ
ಬಳಿಕ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಪರ್ಯಾಯ ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಶ್ರೀಗಳು, ಇಸ್ಕಾನ್ ಮಾಯಾಪುರಿ ಶ್ರೀ ಭಾಗವಹಿಸಿದರು.

