ಲೋಕಸಭಾ ಚುನಾವಣೆಯ ಬ್ಯುಸಿ ನಡುವೆಯೂ ಪವರ್ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ‘ವಿಶ್ವಂಭರ’ ಶೂಟಿಂಗ್ ಸೆಟ್ ಗೆ ಭೇಟಿ ನೀಡಿದ್ದಾರೆ. ಚಿತ್ರೀಕರಣ ಸ್ಥಳಕ್ಕೆ ಬಂದ ಪವನ್ ಕಲ್ಯಾಣ್ ಅವರನ್ನು ತ್ರಿಷಾ (Trisha) ಬರಮಾಡಿಕೊಂಡಿದ್ದಾರೆ. ಜೊತೆಗೆ ಚಿರಂಜೀವಿ (Chiranjeevi) ಕೂಡ ಇದ್ದಾರೆ. ಚಿರು ಜೊತೆ ಮಾತನಾಡುವುದಕ್ಕಾಗಿ ಪವನ್ ಕಲ್ಯಾಣ್ ಬಂದಿದ್ದರು ಎಂದು ಹೇಳಲಾಗುತ್ತಿದೆ.
ಇದು ಚಿರು ನಟಿಸುತ್ತಿರುವ 156ನೇ ಸಿನಿಮಾವಾಗಿದ್ದು, ಜಗದೇಕ ವೀರುಡು ಅತಿಲೋಕ ಸುಂದರಿ ಸಿನಿಮಾದ ಬಳಿಕ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಶ್ವಂಭರ ಎಂಬ ಟೈಟಲ್ ಇಡಲಾಗಿದೆ. ಈ ಟೈಟಲ್ ಟೀಸರ್ ನಲ್ಲಿ ಗ್ರಾಫಿಕ್ಸ್ ಕೆಲಸ ಪರಿಣಾಮಕಾರಿಯಾಗಿದೆ. ಈ ಮೆಗಾ ಫ್ಯಾಂಟಸಿ ಸಾಹಸವನ್ನು ಬಿಂಬಿಸಾರ ಖ್ಯಾತಿಯ ವಸಿಷ್ಠ ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ದೇಶಿಸಿದ್ದಾರೆ. ವಿಕ್ರಮ್, ವಂಶಿ ಮತ್ತು ಪ್ರಮೋದ್ ಹಣ ಹಾಕುತ್ತಿದ್ದು, ಚಿರಂಜೀವಿ ಸಿನಿಕರಿಯ್ ನಲ್ಲಿ ಅತ್ಯಂತ ದುಬಾರಿ ವೆಚ್ಚದ ಚಿತ್ರವಾಗಿದೆ.
ವಿಶ್ವಂಭರ (Vishwambhara) ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಚೋಟಾ ಕೆ ನಾಯ್ಡು ಅವರ ಛಾಯಾಗ್ರಹಣವಿದೆ. ಎಎಸ್ ಪ್ರಕಾಶ್ ನಿರ್ಮಾಣ ವಿನ್ಯಾಸ, ಸುಶ್ಮಿತಾ ಕೊನಿಡೇಲ ವಸ್ತ್ರ ವಿನ್ಯಾಸ ಮಾಡಲಿದ್ದಾರೆ.
ಕೋಟಗಿರಿ ವೆಂಕಟೇಶ್ವರರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಚಿತ್ರಕ್ಕೆ ಸಂಕಲನಕಾರರು. ಶ್ರೀ ಶಿವಶಕ್ತಿ ದತ್ತ ಮತ್ತು ಚಂದ್ರಬೋಸ್ ಗೀತರಚನೆಕಾರರಾಗಿದ್ದರೆ, ಶ್ರೀನಿವಾಸ್ ಗವಿರೆಡ್ಡಿ, ಗಂಟಾ ಶ್ರೀಧರ್, ನಿಮ್ಮಗಡ್ಡ ಶ್ರೀಕಾಂತ್ ಮತ್ತು ಮಯೂಖ್ ಆದಿತ್ಯ ಅವರು ಚಿತ್ರಕಥೆ ಸಹಾಯಕರಾಗಿದ್ದಾರೆ. 2025 ರ ಸಂಕ್ರಾಂತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ.