ಬೆಂಗಳೂರು/ನೆಲಮಂಗಲ: ಪೇ ಸಿಎಂ ಪೋಸ್ಟರ್ (PayCM) ಅಭಿಯಾನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿ ಅನೇಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ರಾತ್ರಿ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮೂವರು ಪೋಸ್ಟರ್ ಅಂಟಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ (Nelamangala) ಟೌನ್ ಠಾಣೆಯಲ್ಲಿ ಆರು ಜನರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಾಲೂಕು ಯೂತ್ ಕಾಂಗ್ರೆಸ್ (Congress) ಅಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಮಿಕ ಘಟಕದ ಅಧ್ಯಕ್ಷ ರಾಮಕೃಷ್ಣ ಮೇಲೂ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿಗಳಿಗೆ ಪೋಸ್ಟರ್ ಅಂಟಿಸುವಂತೆ ಹೇಳಿದ್ದಾರೆಂದು ಇವರ ಮೇಲೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ
Advertisement
Advertisement
ಮೂವರು ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ನೆಲಮಂಗಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಯಲದವರು. ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡಿಲಾಗಿದೆಯೇ ಎಂಬ ಅನುಮಾನದ ಆಧಾರದಲ್ಲಿ ಪೊಲೀಸರ ತನಿಖೆ ಕೈಗೊಂಡಿದ್ದಾರೆ.
Advertisement
Advertisement
ಪೋಸ್ಟರ್ ಅಂಟಿಸಿದವರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, ರಾತ್ರಿ ಹಾಸ್ಟೆಲ್‌ನಿಂದ ಹೊರಬಂದು ವಿದ್ಯಾರ್ಥಿಗಳು ʻಪೇ ಸಿಎಂʼ ಪೋಸ್ಟರ್ ಅಂಟಿಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವಿಜಯಪುರ ಮೂಲದ ಇಬ್ಬರು ಹಾಗೂ ತಮಿಳುನಾಡಿನ ಓರ್ವ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ