ಬೆಂಗಳೂರು: ಮುಡಾ ಹಗರಣದ (MUDA Scam) ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ.
ನೋಂದಣಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಿ ಪತ್ರ ಬರೆದಿದ್ದರು. 2020ರ ಜನವರಿ 12ರಂದು ಪಾರ್ವತಿಯವರು ಮುಡಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಆದರೆ ನೋಂದಣಿ ಶುಲ್ಕವನ್ನು ಒಂದು ದಿನ ಮುಂಚಿತವಾಗಿ ಪಾವತಿ ಮಾಡಿದ್ದರು. ಅಂದರೆ 2020ರ ಜನವರಿ 11ರಂದು ತಹಶೀಲ್ದಾರರಿಂದ ನೋಂದಣಿ ಶುಲ್ಕ ಪಾವತಿ ಮಾಡಿದ್ದಾರೆ. ಸಿದ್ದರಾಮಯ್ಯನವರ ಪ್ರಭಾವ ಅಧಿಕಾರಿಗಳ ಮೇಲೆ ಬೀರಿದೆ ಎಂಬುದಕ್ಕೆ ಮತ್ತೆರಡು ದಾಖಲೆಗಳು ಇದು ಎಂದು ಸ್ನೇಹಮಯಿ ಕೃಷ್ಣ (Snehamayi Krishna) ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಅರ್ಜಿ ಕೊಡುವ ಒಂದು ದಿನದ ಮೊದಲೇ ಶುಲ್ಕ ಪಾವತಿ ಮಾಡಲಾಗಿದೆ. ಈ ರೀತಿ ಪಾವತಿ ಮಾಡಲು ಯಾವ ಕಾನೂನಿನಲ್ಲಿ ಅವಕಾಶ ಇದೆಯಾ? ಇದು ಅಧಿಕಾರಿಗಳ ಮೇಲೆ ನಿಮ್ಮ ಪ್ರಭಾವ ಬೀರಿದೆ ಎಂಬುದನ್ನು ಸಾಬೀತು ಪಡಿಸುವುದಿಲ್ಲವೆ? ಸ್ವತಃ ವಕೀಲರಾದ ಮತ್ತು ಮುಡಾ ಪ್ರಕರಣದಲ್ಲಿ ತಮ್ಮ ಯಾವುದೇ ಪ್ರಭಾವ ಇಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸ್ಪಷ್ಟೀಕರಣ ಕೊಡುವರೆ ಎಂದು ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್ ಶಾ