ನವದೆಹಲಿ: ಅತಿ ವೇಗ ಚಾಲನೆ ಪ್ರಕರಣದಲ್ಲಿ ಪೇಟಿಎಂ ಸಿಇಒ ವಿಜಯ್ ಶೇಖರ್ ಶರ್ಮಾ ಅವರನ್ನು ಕಳೆದ ತಿಂಗಳು ದೆಹಲಿ ಪೊಲೀಸರು ಬಂಧಿಸಿ ನಂತರ ಅವರನ್ನು ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಿದ್ದಾರೆ.
Advertisement
Advertisement
ವಿಜಯ್ ಶೇಖರ್ ಶರ್ಮಾ ಅವರು ಜಾಗ್ವಾರ್ ಲ್ಯಾಂಡ್ ರೋವರ್ ಕಾರನ್ನು ಹೊಂದಿದ್ದು, ಕಳೆದ ತಿಂಗಳು ವೇಗವಾಗಿ ಕಾರಿನಲ್ಲಿ ಬಂದು ದಕ್ಷಿಣ ದೆಹಲಿಯ ಜಿಲ್ಲಾ ಪೊಲೀಸ್ ಆಯುಕ್ತರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್
Advertisement
Advertisement
ಫೆಬ್ರವರಿ 22 ರಂದು ಮದರ್ ಇಂಟರ್‍ನ್ಯಾಶನಲ್ ಸ್ಕೂಲ್ ಹೊರಗೆ ಡಿಸಿಪಿ ಬೆನಿಟಾ ಮೇರಿ ಜೈಕರ್ ಅವರ ಕಾರಿಗೆ ವಿಜಯ್ ಶೇಖರ್ ಶರ್ಮಾ ಅವರ ಲ್ಯಾಂಡ್ ರೋವರ್ ಡಿಕ್ಕಿ ಹೊಡೆದು, ನಂತರ ವಿಜಯ್ ಶೇಖರ್ ಶರ್ಮಾ ಅವರು ಸ್ಥಳದಿಂದ ಪರಾರಿಯಾಗಿದ್ದರು. ಡಿಸಿಪಿ ಅವರ ಕಾರನ್ನು ಓಡಿಸುತ್ತಿದ್ದ ಚಾಲಕ, ಕಾನ್‍ಸ್ಟೇಬಲ್ ದೀಪಕ್ ಕುಮಾರ್ ಅವರು, ಲ್ಯಾಂಡ್ ರೋವರ್ ಕಾರಿನ ನಂಬರ್ ಬರೆದಿಟ್ಟುಕೊಂಡು ಡಿಸಿಪಿಗೆ ಮಾಹಿತಿ ನೀಡಿದ್ದಾರೆ.
Delhi | Vijay Shekhar Sharma, founder and CEO of Paytm, was arrested and later released on bail for ramming his car into the vehicle of DCP South in the month of February
— ANI (@ANI) March 13, 2022
ನಂತರ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೆ ಕಾರು ಗುರುಗ್ರಾಮ್‍ನ ಕಂಪನಿಯೊಂದಕ್ಕೆ ನೋಂದಾಯಿಸಲಾಗಿದ್ದು, ಕಾರು ದಕ್ಷಿಣ ದೆಹಲಿಯಲ್ಲಿ ನೆಲೆಸಿರುವ ವಿಜಯ್ ಶಂಕರ್ ಶರ್ಮಾ ಅವರಿಗೆ ಸೇರಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ ವಿಜಯ್ ಶೇಖರ್ ಶರ್ಮಾ ಅವರನ್ನು ಬಂಧಿಸಲಾಗಿತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವುದಾಗಿ ದೆಹಲಿ ಪೊಲೀಸ್ ವಕ್ತಾರ ಸುಮನ್ ನಲ್ವಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್