ನವದೆಹಲಿ: ಡಿಜಿಟಲ್ ಪಾವತಿ ಅಪ್ಲಿಕೇಶನ್ ಪೇಟಿಎಂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಹಲವು ಬಳಕೆದಾರರು ದೂರು ನೀಡಿದ್ದಾರೆ. ಅಪ್ಲಿಕೇಶನ್‌ನಲ್ಲಿ ಲಾಗ್‌ಇನ್ ಹಾಗೂ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ವರದಿಯಾಗಿದೆ. ಈ ಸಮಸ್ಯೆಯನ್ನು ಪೇಟಿಎಂ ಕೂಡಾ ಒಪ್ಪಿಕೊಂಡಿದ್ದು, ದೋಷವನ್ನು ಸರಿಪಡಿಸುವುದಾಗಿ ತಿಳಿಸಿದೆ.
ಪೇಟಿಎಂನ ಸಮಸ್ಯೆ ಬೆಂಗಳೂರು ಸೇರಿದಂತೆ ದೆಹಲಿ, ಮುಂಬೈ, ಅಹಮದಾಬಾದ್, ಚೆನ್ನೈನಂತಹ ಹಲವಾರು ನಗರಗಳಲ್ಲಿ ಬಳಕೆದಾರರು ಎದುರಿಸಿರುವುದಾಗಿ ವರದಿಯಾಗಿದೆ. ದೂರು ನೀಡಿರುವ ಬಳಕೆದಾರರ ಪೈಕಿ ಶೇ.66 ರಷ್ಟು ಜನರು ಲಾಗ್‌ಇನ್ ಸಮಸ್ಯೆಯನ್ನು ಎದುರಿಸಿದ್ದಾರೆ. ಶೇ.5 ರಷ್ಟು ಜನರು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಉಳಿದ ಶೇ.29 ರಷ್ಟು ಬಳಕೆದಾರರು ಇತರ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇದನ್ನೂ ಓದಿ: ಜಾಹೀರಾತುಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುವಂತಿಲ್ಲ- ಇರಾನ್‌ನಲ್ಲಿ ಆದೇಶ
Advertisement
Advertisement
ಬಳಕೆದಾರರು ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ಒಪ್ಪಿಕೊಂಡಿರುವ ಪೇಟಿಎಂ, ಅದನ್ನು ಸರಿಪಡಿಸಲು ಕೆಲಸ ಮಾಡುತ್ತಿದೆ ಎಂದಿದೆ. ಪೇಟಿಎಂ ಅಪ್ಲಿಕೇಶನ್‌ನಲ್ಲಿ ಕೆಲವು ಬಳಕೆದಾರರು ಲಾಗ್‌ಇನ್ ಮಾಡುವಲ್ಲಿ ಸಮಸ್ಯೆ ಎದುರಿಸುತ್ತಿರಬಹುದು. ನಾವು ಈಗಾಗಲೇ ಈ ಸಮಸ್ಯೆಯನ್ನು ಶೀಘ್ರವಾಗಿ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ. ಅದನ್ನು ಸರಿಪಡಿಸಿದ ತಕ್ಷಣವೇ ಅದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಟ್ವೀಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?