‘ಕಡ್ಡಿಪುಡಿ’ ಚಂದ್ರು ವಿರುದ್ಧ ಠಾಣೆ ಮೆಟ್ಟಿಲೇರಿದ ‘ರೊಮಿಯೋ’ ಖ್ಯಾತಿಯ ಪಿಸಿ ಶೇಖರ್

Public TV
2 Min Read
PC SHEKAR

ನ್ನಡದ ಸಿನಿಮಾರಂಗದ ನಿರ್ಮಾಪಕ ಕಡ್ಡಿಪುಡಿ ಚಂದ್ರು (Kadipudi Chandru) ವಿರುದ್ಧ ‘ರೊಮಿಯೋ’ ಖ್ಯಾತಿಯ ನಿರ್ದೇಶಕ ಪಿಸಿ ಶೇಖರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇಬ್ಬರೂ ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಬರ್ಡ್ಸ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಸಿನಿಮಾ ರಿಲೀಸ್ ಆಗಿ ಅನೇಕ ದಿನಗಳ ಬಳಿಕ ಇಬ್ಬರೂ ಹಣಕಾಸಿನ ವಿಚಾರಕ್ಕೆ ಕಿತ್ತಾಡಿಕೊಂಡಿದ್ದು, ಈಗ ಠಾಣೆ ಮೆಟ್ಟಿಲೇರಿದ್ದಾರೆ. ತನಗೆ ಬರಬೇಕಾದ ಸಂಭಾವನೆ ನೀಡಿಲ್ಲ ಎಂದು ನಿರ್ಮಾಪಕ ಚಂದ್ರು ವಿರುದ್ಧ ನಿರ್ದೇಶಕ ಪಿಸಿ ಶೇಖರ್ ಆರೋಪಿಸಿದ್ದಾರೆ. ಸಂಭಾವನೆ ಕೇಳಿದ್ದಕ್ಕೆ ‘ಕಡ್ಡಿಪುಡಿ’ ಚಂದ್ರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಪಿಸಿ. ಶೇಖರ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಭಾವಿಪತಿಗೆ ಸಿಹಿಮುತ್ತು ಕೊಟ್ಟು, ನಿಶ್ಚಿತಾರ್ಥದ ಸುದ್ದಿ ಹಂಚಿಕೊಂಡ ಅನುರಾಗ್‌ ಕಶ್ಯಪ್‌ ಪುತ್ರಿ

PC SHEKAR 1

ಈ ವರ್ಷ ತೆರೆಕಂಡ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಟನೆಯ ‘ಲವ್ ಬರ್ಡ್ಸ್’ (Love Birds) ಸಿನಿಮಾದಲ್ಲಿ ನಿರ್ದೇಶಕರಾಗಿ ಪಿಸಿ ಶೇಖರ್ (Pc Shekar) ಕೆಲಸ ಮಾಡಲು 20 ಲಕ್ಷ ರೂಪಾಯಿಗೆ ಅಗ್ರಿಮೆಂಟ್ ಆಗಿತ್ತು. ಅಗ್ರಿಮೆಂಟ್‌ಗೆ ತಕ್ಕಂತೆ ಪಿಸಿ ಶೇಖರ್ ಕೆಲಸ ಮಾಡಿದ್ದಾರೆ. ಈ ನಡುವೆ ಸಿನಿಮಾ ಎಡಿಟಿಂಗ್ ಸಲುವಾಗಿ ಐದು ಲಕ್ಷ ರೂಪಾಯಿ ಹೆಚ್ಚುವರಿ ಖರ್ಚು ಆಗಿತ್ತು. ಒಟ್ಟು 25 ಲಕ್ಷ ರೂಪಾಯಿ ಹಣವನ್ನು ನಿರ್ದೇಶಕ ಪಿಸಿ ಶೇಖರ್ ಅವರಿಗೆ ಕಡ್ಡಿಪುಡಿ ಚಂದ್ರು ನೀಡಬೇಕಿತ್ತು. ಆದರೆ ಅವರು ಕೊಟ್ಟಿರುವುದು 6.5 ಲಕ್ಷ ರೂಪಾಯಿ ಮಾತ್ರ. ಬಾಕಿ ಹಣ ಕೇಳಿದ್ದಕ್ಕೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ತಮ್ಮಿಂದ ಕ್ಲಿಯರೆನ್ಸ್ ಪಡೆದಿರುವುದಾಗಿ ಚಂದ್ರು ನಕಲಿ ಸಹಿ ಮಾಡಿದ್ದಾರೆ ಎಂದು ನಿರ್ದೇಶಕ ಪಿಸಿ ಶೇಖರ್ ಆರೋಪ ಮಾಡಿದ್ದಾರೆ.

p c shekar

ದೂರಿನಲ್ಲಿ ಹದಿನೆಂಟೂವರೆ ಲಕ್ಷ ರೂಪಾಯಿ ಹಣ ಕೊಟ್ಟಿಲ್ಲ. ನಕಲಿ ಸಹಿ ಮಾಡಿ ನನಗೆ ಕೊಡಬೇಕಿದ್ದ ಹಣ ನೀಡಿಲ್ಲ. ನನ್ನ ಬಗ್ಗೆಯೇ ಕೆಟ್ಟದಾಗಿ ಚಿತ್ರರಂಗದಲ್ಲಿ ಮಾತನಾಡಿದ್ದಾರೆ. ಹಲವಾರು ನಿರ್ಮಾಪಕರ ಬಳಿ ಸಿನಿಮಾದಲ್ಲಿ ಅವಕಾಶ ನೀಡದಂತೆ ಬೆದರಿಸಿದ್ದಾರೆ ಎಂದು ಪಿ.ಸಿ. ಶೇಖರ್ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಚಂದ್ರು ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅವರಿಗೆ ಎಷ್ಟು ಸಂಭಾವನೆ ಕೊಡುತ್ತೇನೆ ಎಂದು ಹೇಳಿದ್ದೆನೋ, ಅಷ್ಟು ನಾನು ಕೊಟ್ಟಿದ್ದೇನೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಿಳಿಸಿದ್ದೇನೆ. ಅಲ್ಲಿಯೂ ಚರ್ಚೆ ನಡೆಯುತ್ತಿದೆ. ಹಾಗೆಯೇ ಸದ್ಯ ನಾನು ಇದನ್ನು ಕಾನೂನು ಮೂಲಕ ಬಗೆಹರಿಸಿಕೊಳ್ಳುತ್ತೇನೆ ಎಂದು ಮಾತನಾಡಿದ್ದಾರೆ.

Share This Article