ಬೆಳಗಾವಿ: ಜಿಲ್ಲೆಯ ಕಿಣೆ (Kine) ಗ್ರಾಮ ಪಂಚಾಯತಿಗೆ ನುಗ್ಗಿ ಪಿಡಿಓಗೆ ಮರಾಠಿಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿಣೆ ಗ್ರಾಮದ ತಿಪ್ಪಣ್ಣ ಡೋಕ್ರೆ ಬಂಧಿತ ಆರೋಪಿ. ಬುಧವಾರ ಬೆಳಗಾವಿಯ ಕಿಣೆ ಗ್ರಾಮ ಪಂಚಾಯತಿ ಪಿಡಿಓ ನಾಗೇಂದ್ರ ಪತ್ತಾರ್ ಅವರಿಗೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ತಿಪ್ಪಣ್ಣ ಆವಾಜ್ ಹಾಕಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದನ್ನೂ ಓದಿ: ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ
ವಿಡಿಯೋ ವೈರಲ್ ಆಗುತ್ತಿದ್ದಂತೆ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆರೋಪಿ ತಿಪ್ಪಣ್ಣ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆರೋಪಿಯನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿ, ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ; ಕಾಫಿನಾಡ ಮುಳ್ಳಯ್ಯನಗಿರಿ-ದತ್ತಪೀಠ 3 ದಿನ ಬಂದ್!