ಬೆಂಗಳೂರು: ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್
ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲ ವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ನೀಡಿದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ, ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಇದನ್ನೂ ಓದಿ: 7 ವರ್ಷಗಳ ನಂತರ ಚೀನಾಗೆ ಪ್ರಧಾನಿ ಮೋದಿ ಭೇಟಿ
Today at Raj Bhavan, I participated in the President’s Police Medal Award Ceremony organised by the State Home Department. Hon’ble Governor Shri Thaawarchand Gehlot felicitated officers for their exceptional and distinguished service. I had the honour of congratulating the… pic.twitter.com/UVgqODzcvR
— Siddaramaiah (@siddaramaiah) August 30, 2025
ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲ ವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದು ಹೇಳಿದರು.ಇದನ್ನೂ ಓದಿ: ಇನ್ಮುಂದೆ ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ: ರಾಜನಾಥ್ ಸಿಂಗ್