ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪ್ರತೀಕಾರದ ದಾಳಿ ನಡೆಸಿದೆ. ರಾತ್ರೋ ರಾತ್ರಿ ಪಾಕ್ ಉಗ್ರತಾಣಗಳನ್ನ ಉಡೀಸ್ ಮಾಡಿ 80ಕ್ಕೂ ಹೆಚ್ಚು ಉಗ್ರರ ಹತ್ಯೆಗೈದಿದೆ. ಭಾರತದ ಸೇನಾ (Indian Army) ಕಾರ್ಯಾಚರಣೆಯಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಯೋಧರಿಗೆ ಹೊಗಳಿಕೆಯ ಮಹಾಪೂರವೇ ಹರಿದುಬರುತ್ತಿದೆ, ಈ ನಡುವೆ ಕರ್ನಾಟಕ ಕಾಂಗ್ರೆಸ್ (Karnataka Congress) ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡಿದ್ದು ಮತ್ತೆ ಎಡವಟ್ಟು ಮಾಡಿಕೊಂಡಿದೆ.
The Indian Air Force (IAF), widely recognised as one of the world’s strongest air forces gave a befitting reply to the cowardly #PahalgamTerroristAttack
We stand with the govt, we stand with our security forces. #OperationSindoor pic.twitter.com/NnkFjr9MEq
— Karnataka Congress (@INCKarnataka) May 7, 2025
ʻಆಪರೇಷನ್ ಸಿಂಧೂರʼ (Operation Sindoor) ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಮಹಾತ್ಮ ಗಾಂಧಿ ಅವರ ʻಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿʼ ಎಂಬ ಸಂದೇಶವನ್ನು ಹಂಚಿಕೊಂಡಿತ್ತು. ಕಾಂಗ್ರೆಸ್ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಕೆಲವೇ ಕ್ಷಣಗಳಲ್ಲಿ ಎಕ್ಸ್ ಪೋಸ್ಟ್ ಅನ್ನು ಡಿಲೀಟ್ ಮಾಡಿ, ಮತ್ತೊಂದು ಪೋಸ್ಟ್ ಹಂಚಿಕೊಂಡು ಸೇನೆಯನ್ನು ಕೊಂಡಾಡಿದೆ. ಇದನ್ನೂ ಓದಿ: Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್
ʻವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದೆಂದು ವ್ಯಾಪಕವಾಗಿ ಗುರುತಿಸಲ್ಪಟ್ಟ ಭಾರತೀಯ ವಾಯುಪಡೆ (IAF) ಹೇಡಿತನದ ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ನೀಡಿದೆ. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆʼ ಎಂದು ಮತ್ತೊಂದು ಪೋಸ್ಟ್ ಅನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಇದನ್ನೂ ಓದಿ: ನಾವು ಭಾರತದ ಸೈನಿಕರನ್ನು ಸೆರೆ ಹಿಡಿದಿಲ್ಲ: ಬುರುಡೆ ಬಿಟ್ಟು ಸತ್ಯ ಒಪ್ಪಿಕೊಂಡ ಪಾಕ್ ಸಚಿವ
80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್
ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್ ನಡೆಸಿದ್ದು, ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ. ಇದನ್ನೂ ಓದಿ: Operation Sindoor | ಭಾರತದ ಪ್ರತೀಕಾರ ದಾಳಿಗೆ 15 ಎಕ್ರೆ ವಿಸ್ತೀರ್ಣದಲ್ಲಿದ್ದ ಮಸೂದ್ ತಾಣ ಢಮಾರ್
ಹೌದು.. ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ರಫೇಲ್ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ಜೆಟ್‌ಗಳು ಸೇಫ್ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ.
ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.
ಭಾರತ ಪಾಕಿಸ್ತಾನಗಳ ನಡುವೆ ಸೇನಾ ಸಮರದ ನಡೆಯಲಿದೆ ಎಂದು ಚರ್ಚೆಯಾಗಿತ್ತು. ಅದಕ್ಕೆ ಪೂರಕ ಎಂಬಂತೆ ಎರಡು ರಾಷ್ಟ್ರಗಳು ಸಮರಾಭ್ಯಾಸ ಸೇರಿದಂತೆ ಸೇನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸಿದ್ದವು. ಶತ್ರು ರಾಷ್ಟ್ರದಿಂದ ದಾಳಿ ನಡೆದ ಪಕ್ಷದಲ್ಲಿ ನಾಗರಿಕರಿಗೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಿದ್ಧತೆ ಕೈಗೊಳ್ಳುವುದಕ್ಕಾಗಿ ಬುಧವಾರ ನಾಗರಿಕ ಸ್ವರಕ್ಷಣೆ ತಾಲೀಮು ನಡೆಸಲು ಕೇಂದ್ರ ಗೃಹಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ರಾಜ್ಯಗಳು ಸಿದ್ಧತೆಯನ್ನೂ ನಡೆಸಿದ್ದವು. ಇದರ ನಡುವೆಯೇ ಭಾರತೀಯ ಸೇನೆಯು ಮಂಗಳವಾರ ರಾತ್ರಿ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.