ದಾವಣಗೆರೆ: ಮೀಸಲು ಅರಣ್ಯ ಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷಿಗಳ ಮಾರಣಹೋಮ ನಡೆಯುತ್ತಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗೋಪಗೊಂಡನಹಳ್ಳಿಯ ಸುತ್ತಮುತ್ತಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನವಿಲುಗಳು ಸಾವನ್ನಪ್ಪುತ್ತಿವೆ. ಜಗಳೂರು ಸುತ್ತಮುತ್ತಾ ನವಿಲು ಸಂತತಿ ಹೆಚ್ಚಿನ ಪ್ರಮಾಣದಲ್ಲಿದ್ದು, ಬೇಟೆಗಾರರು ಮಾಂಸಕ್ಕಾಗಿ ನವಿಲುಗಳನ್ನು ಬೇಟೆಯಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Advertisement
Advertisement
ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಬೇಟೆಗಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪಕ್ಷಿ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ತಿಂಗಳಿಂದ ನಿರಂತರವಾಗಿ ಅನುಮಾನಾಸ್ಪದ ರೀತಿಯಲ್ಲಿ ನವಿಲುಗಳು ಮೃತ ಪಡುತ್ತಿವೆ. ಒಂದು ತಿಂಗಳ ಹಿಂದೆ ಮೂರು ನವಿಲುಗಳು ಮೃತ ಪಟ್ಟಿದ್ದವು ಎಂದು ಪಕ್ಷಿ ಪ್ರಿಯರು ಮಾಹಿತಿ ನೀಡಿದ್ದಾರೆ.