ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫ್ಲೈಓವರ್ (Peenya Flyover) ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್‌ಗಾಗಿ (Load Testing) ಎನ್‌ಹೆಚ್‌ಎ (NHA) ಮನವಿ ಮೇರೆಗೆ ಸಂಚಾರಿ ಪೊಲೀಸರು ಇಂದಿನಿಂದ ಫ್ಲೈಓವರ್ ಕ್ಲೋಸ್ ಮಾಡಲಿದ್ದಾರೆ.
Advertisement
ಸುಮಾರು ಮೂರು ವರ್ಷದಿಂದ ಪೀಣ್ಯ ಫ್ಲೈಓವರ್ ಭಾರಿ ವಾಹನಗಳಿಗೆ ಬಂದ್ ಆಗಿದೆ. 2021ರಲ್ಲಿ ಪೀಣ್ಯ ಫ್ಲೈಓವರ್‌ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಭಾರಿ ಪ್ರಮಾಣದ ವಾಹನಗಳ ಸಂಚಾರ ನಿಷೇಧ ಮಾಡಲಾಗಿತ್ತು. ಪೀಣ್ಯ ಫ್ಲೈಓವರ್‌ನ ಗುಣಮಟ್ಟ ಸರಿಯಿಲ್ಲ, ಕಳಪೆ ಕಾಮಾಗಾರಿ, ಇಡೀ ಫ್ಲೈಓವರ್ ಅನ್ನು ಕೆಡವಬೇಕು ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಕೆಲ ದಿನಗಳ ನಂತರ ಸಣ್ಣಪುಟ್ಟ ಕಾಮಾಗಾರಿ ಮಾಡಿ ಕೆಲ ಕೇಬಲ್‌ಗಳನ್ನು ಅಳವಡಿಸಿ ಸಣ್ಣ ಪ್ರಮಾಣದ ವೆಹಿಕಲ್ ಓಡಾಟಕ್ಕೆ ಅವಕಾಶ ಮಾಡಲಾಗಿತ್ತು. ಫ್ಲೈಓವರ್ ಮೇಲೆ ಸಂಪೂರ್ಣವಾಗಿ ಹೆವಿ ವೆಹಿಕಲ್‌ಗಳ ಓಡಾಟ ನಿರ್ಬಂಧಿಸಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಇದನ್ನೂ ಓದಿ: ನನಗೆ ತುಂಬಾ ಖುಷಿಯಾಗಿದೆ: ಅಯೋಧ್ಯೆ ರಾಮಮಂದಿರಕ್ಕೆ ಮಗ ಕೆತ್ತಿರುವ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿದ್ದಕ್ಕೆ ತಾಯಿ ಸಂತಸ
Advertisement
Advertisement
ಇಂದು ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆವರೆಗೆ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಎನ್‌ಹೆಚ್‌ಎಐ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿದ್ದು, ಹೆವಿ ವೆಹಿಕಲ್‌ಗಳ ಓಡಾಟ ನಡೆಸಿ ಪರೀಕ್ಷೆ ನಡೆಸಲಿದ್ದಾರೆ. ಹೆವಿ ವೆಹಿಕಲ್‌ಗಳ ಓಡಾಟಕ್ಕೆ ತಂತ್ರಜ್ಞರು ಯೆಸ್ ಅಂದರೆ ಇನ್ಮುಂದೆ ಬಸ್ಸು, ಲಾರಿಗಳು ಫ್ಲೈಓವರ್ ಮೇಲೆಯೇ ಸಾಗಬಹುದು. ಹೀಗಾಗಿ ಎನ್‌ಹೆಚ್‌ಎಐ ಅಧಿಕಾರಿಗಳ ಮನವಿ ಮೇರೆಗೆ ಮೂರು ದಿನಗಳ ಕಾಲ ಸಂಚಾರಿ ಪೊಲೀಸರು ಫ್ಲೈಓವರ್ ಬಂದ್ ಮಾಡಲಿದ್ದಾರೆ. ಮೂರು ದಿನಗಳ ಕಾಲ ಎನ್‌ಹೆಚ್ 48ರಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಲಿದ್ದು, ವಾಹನ ಸವಾರರು ಪರ್ಯಾಯ ರಸ್ತೆ ಬಳಸುವುದು ಒಳಿತು. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಫುಡ್ ಡೆಲಿವರಿ ಬಾಯ್ ಬಲಿ
Advertisement