ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ (Peenya Flyover) ಇದೀಗ ಓಪನ್ ಆಗಿದ್ದು, ವಾಹನ ಸಂಚಾರ ಆರಂಭವಾಗಿದೆ.
ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫೈಓವರ್‌ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮೇ 5ರಂದು ಕೇಬಲ್ ಅಳವಡಿಕೆ ಮತ್ತು ಲೋಡ್ ಟೆಸ್ಟಿಂಗ್ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫ್ಲೈಓವರ್ ಬಂದ್ ಮಾಡಿ, ವಾಹನ ಸಂಚಾರಕ್ಕೆ ನಿರ್ಬಂಧ ಹೇರಿತ್ತು. ಇದನ್ನೂ ಓದಿ: ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್
ಕೇಬಲ್ ಅಳವಡಿಕೆ ಮುಕ್ತಾಯ ಆಗಿದ್ದು, ಲೋಡ್ ಟೆಸ್ಟಿಂಗ್ ಕೂಡ ಯಶಸ್ವಿಯಾಗಿದೆ. ಬೆಳಗ್ಗೆ 11 ಗಂಟೆಯಿಂದಲೇ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ನಾಲ್ಕು ದಿನದಿಂದ ಫ್ಲೈಓವರ್ ಬಂದ್ ಆಗಿದ್ದಕ್ಕೆ ವಾಹನ ಸವಾರರು ಟ್ರಾಫಿಕ್‌ನಿಂದ ಪರದಾಡಿದ್ದರು. ಸದ್ಯ ಎಂದಿನಂತೆ ಎರಡು ದಿಕ್ಕಿನಲ್ಲೂ ಫ್ಲೈಓವರ್ ಮೇಲೆ ಸಂಚಾರ ಆರಂಭವಾಗಿದೆ.

