ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಜೂನ್ 28 ವರೆಗೂ ಸಮಯ ವಿಸ್ತರಿಸಿದೆ.
ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಸಮಿತಿ ತನ್ನ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿತು. ಸಮಿತಿಯು 29 ಮೂಬೈಲ್ ಸಾಧನಗಳನ್ನು ತನಿಖೆಗೆ ಒಳಪಡಿಸಿದೆ. ಈ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಸಮಯದ ಅವಶ್ಯಕತೆ ಇದೆ. ಹೀಗಾಗಿ ಸಮಯ ವಿಸ್ತರಿಸಬೇಕು ಎಂದು ಸಮಿತಿ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ
Advertisement
ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ತಾಂತ್ರಿಕ ವರದಿ ಪಡೆದ ಬಳಿಕ ನ್ಯಾಯಾಧೀಶರು ತಮ್ಮ ಅಭಿಪ್ರಾಯವನ್ನು ಕೂಡಾ ತಿಳಿಸಬೇಕು, ಅದಕ್ಕೆ ಸಮಯ ಬೇಕಾಗಬಹುದು. ಹೀಗಾಗಿ ಸಮಯ ವಿಸ್ತರಿಸಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ನಾಲ್ಕು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳು ಅಂತ್ಯವಾಗಬೇಕು. ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.
Advertisement
ಹಗರಣದ ತನಿಖೆಗಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಿತ್ತು. ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಮತ್ತು ಅಲೋಕ್ ಜೋಶಿ(ಮಾಜಿ IPS ಅಧಿಕಾರಿ) ಮತ್ತು ಡಾ.ಸಂದೀಪ್ ಒಬೆರಾಯ್, ಉಪ ಸಮಿತಿಯ ಅಧ್ಯಕ್ಷರು (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಕಮಿಟಿ) ರನ್ನು ಸಮಿತಿ ಒಳಗೊಂಡಿದೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು
Advertisement
Advertisement
ಏನಿದು ಪ್ರಕರಣ?
2017ರಲ್ಲಿ 2 ಶತಕೋಟಿ ಡಾಲರ್ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಖರೀದಿ ಸಂಬಂಧ ಭಾರತ ಮತ್ತು ಇಸ್ರೇಲ್ ಮಧ್ಯೆ ಒಪ್ಪಂದ ನಡೆದಿತ್ತು. ಈ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್ ತಂತ್ರಾಂಶವನ್ನೂ ಭಾರತ ಖರೀದಿಸಿದೆ ಎಂಬ ಆರೋಪ ಬಂದಿದೆ.
ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್ ಸಾಫ್ಟ್‌ವೇರ್ ಅನ್ನು ಬಳಸುತ್ತಿವೆ. ಪೆಗಾಸಸ್ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂದು ಪತ್ರಕರ್ತರು, ರಾಜಕೀಯ ನಾಯಕರು ದೂರಿದ್ದರು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿ ಹಾಕಿತ್ತು.