ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಆಗ್ರಹಿಸಿದ್ದಾರೆ.
ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಸುಗ್ರಿವಾಜ್ಞೆ ಹೊರಡಿಸಿ ಎರಡು ಸದನಗಳಿಂದ ಒಪ್ಪಿಗೆ ಪಡೆಯಬೇಕು ಎಂದ ಅವರು, ಎಲ್ಲ ಸ್ವಾಮೀಜಿಗಳ ಅಭಿಪ್ರಾಯವೂ ಇದೆಯಾಗಿದೆ ಎಂದು ತಿಳಿಸಿದರು.
Advertisement
Advertisement
ಈ ಸಂಬಂಧ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದಾದರೆ, ನಾನು ನಿಯೋಗದೊಂದಿಗೆ ತೆರಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಿಸಿ: ಕೇಂದ್ರಕ್ಕೆ ಭಾಗವತ್ ಸೂಚನೆ
Advertisement
ಇದೇ ವೇಳೆ ಮಾಧ್ಯಮಗಳು ಶಬರಿಮಲೆ ವಿವಾದದ ಕುರಿತು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, ಈ ವಿಚಾರವಾಗಿ ನಾನು ತಟಸ್ಥ. ಒಂದು ಕಡೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮತ್ತೊಂದು ಕಡೆ ಜನಾಭಿಪ್ರಾಯ ಹಾಗೂ ಸಂಪ್ರದಾಯದ ಮಧ್ಯೆ ಸಂಘರ್ಷ ಪ್ರಾರಂಭವಾಗಿದೆ. ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ನೀಡಬೇಕು ಎನ್ನುವುದು ವೈಯಕ್ತಿಕ ಅಭಿಪ್ರಾಯ. ವಿವಿಧ ದೇವಾಲಯಗಳಲ್ಲಿ ಮಹಿಳೆಯರಿಗೆ ಪ್ರವೇಶವಿದೆ. ಆದರೆ ಶಬರಿಮಲೆ ಸಂಪ್ರದಾಯದ ಪ್ರಕಾರ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದೆ. ಹೀಗಾಗಿ ಅಲ್ಲಿನ ದೇವಸ್ಥಾನ ಆಡಳಿತ ಸಿಬ್ಬಂದಿಯೇ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv