ಉಡುಪಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದ ಎಲ್ಲೆಡೆ ಸಾಮೂಹಿಕವಾಗಿ ಯೋಗಾಸನ ಮಾಡುವ ಮೂಲಕ ಆಚರಿಸಲಾಗುತ್ತಿದೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸದಲ್ಲಿದ್ದು, ಮಠದಲ್ಲೇ ಯೋಗಾಭ್ಯಾಸ ಮಾಡಿದರು.
ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸ ಕೈಗೊಂಡಿದ್ದು, ಹಲವಾರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಠದ ಶಿಷ್ಯರ ಜೊತೆ ಬೆಳಗ್ಗೆ ಯೋಗಾಭ್ಯಾಸವನ್ನು ಮಾಡಿದರು. ಪ್ರತಿದಿನ ಪೇಜಾವರ ಶ್ರೀಗಳು ಯೋಗಾಭ್ಯಾಸವನ್ನು ಮಾಡಿ ದೇಹವನ್ನು ಸದೃಢವಾಗಿ ಇಟ್ಟುಕೊಂಡಿದ್ದಾರೆ.
Advertisement
Advertisement
ಈ ಬಗ್ಗೆ ಮಾತನಾಡಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ಯೋಗ ಪ್ರಾಚೀನ ಕಾಲದ ಋಷಿ ಮುನಿಗಳಿಂದ ಮಾನವ ಜನಾಂಗಕ್ಕೆ ಸಿಕ್ಕಿರುವ ಹಲವಾರು ಕೊಡುಗೆಗಳಲ್ಲೊಂದು. ಪ್ರಕೃತಿಯ ನಡುವೆ ಸಂಪರ್ಕದಲ್ಲಿದ್ದ ಋಷಿಮುನಿಗಳಿಗೆ ಯೋಗದ ಅಗತ್ಯ ಇರಲಿಲ್ಲ. ಇಂದು ಮಾನವಕುಲ ಪ್ರಕೃತಿಯಿಂದ ದೂರವಾಗಿರುವ ಹೊತ್ತಿನಲ್ಲಿ ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಅಂತಹ ಯೋಗವನ್ನು ನಾವು ನಮ್ಮ ಜೀವನದಲ್ಲಿ ನಿತ್ಯ ರೂಪಿಸಿಕೊಳ್ಳೋಣ ಎಂದು ಹೇಳಿದರು. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ
Advertisement
Advertisement
ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರಕ್ಕೆ ಬಂದು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ನಾಡಿಗೆ ಪ್ರಧಾನಿಗಳು ಬಂದದ್ದು, ಬಹಳ ಸಂತೋಷದ ಸಂಗತಿ. ಅವರ ಆಗಮನದಿಂದ ಯೋಗದ ಮಹತ್ವ ಹೆಚ್ಚಾಗಿದೆ. ಅವರನ್ನು ಮಠದ ಪರವಾಗಿ ಅಭಿನಂದಿಸುತ್ತೇನೆ. ಜನರಲ್ಲಿ ಯೋಗಾಭ್ಯಾಸದ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಎಳೆಯ ಮಕ್ಕಳಲ್ಲೇ ಯೋಗದ ಮಹತ್ವದ ಬಗ್ಗೆ ನಾವು ಅರಿವು ಮೂಡಿಸಬೇಕು. ಆ ಮೂಲಕ ಮಾನವ ಜನಾಂಗ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಐಟಿಬಿಪಿ ಯೋಧರಿಂದ ಹಿಮಾಲಯದ 17 ಸಾವಿರ ಅಡಿ ಎತ್ತರದಲ್ಲಿ ಯೋಗ