ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ.
ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ ಹೆಲಿಕಾಪ್ಟರ್ ಮಧ್ಯಾಹ್ನ 3:35ಕ್ಕೆ ಎಚ್‍ಎಎಲ್ ತಲುಪಿತು. ಇಲ್ಲಿಂದ ಅಲಕೃಂತಗೊಂಡ ತೆರೆದ ವಾಹನದಲ್ಲಿ ಮೃತ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ತರಲಾಯಿತು.
Advertisement
ಸಂಜೆ 5:30ರ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಬಳಿಕ ಮೆರವಣಿಗೆಯೊಂದಿಗೆ ವಿದ್ಯಾಪೀಠಕ್ಕೆ ತರಲಾಗುತ್ತದೆ. ರಾಘವೇಂದ್ರ, ಕೃಷ್ಣ, ಮದ್ವಚಾರ್ಯರ ಮೂರ್ತಿಗೆ ಪೂಜೆ ಮಾಡಿದ ಬಳಿಕ ಅಂತ್ಯ ಕ್ರಿಯೆ ನಡೆಯಲಿದೆ.
Advertisement
Advertisement
ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರ ಉಡುಪಿಯಿಂದ ಈಗಾಗಲೇ ಬೆಂಗಳೂರಿಗೆ ಬಂದಿದೆ.
Advertisement
ವಿದ್ಯಾಪೀಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ ಯಾರನ್ನೂ ಒಳಗಡೆ ಬಿಡುತ್ತಿಲ್ಲ. ಗೇಟ್ ಬಳಿಯೇ ಪೊಲೀಸರು ತಡೆಯುತ್ತಿದ್ದು ಪಾಸ್ ಹೊಂದಿರುವ ಭಕ್ತರನ್ನು ಮಾತ್ರ ಒಳಗಡೆ ಬಿಡುತ್ತಿದ್ದಾರೆ.