ಉಡುಪಿ: ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಶ್ರೀಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಈ ಹಿಂದೆ ಶ್ರೀಗಳು ಉತ್ತರ ಭಾರತ, ತಿರುಪತಿ ಹಾಗೂ ಚೆನ್ನೈ ಪ್ರವಾಸದಲ್ಲಿದ್ದರು. ಗುರುವಾರ ರಾತ್ರಿ ಶೀತದಿಂದ ಬಳಲುತ್ತಿದ್ದ ಶ್ರೀಗಳಿಗೆ ಮುಂಜಾನೆ ತೀವ್ರವಾಗಿ ಉಸಿರಾಟದ ತೊಂದರೆ ಉಂಟಾಗಿದೆ.
Advertisement