ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂದಿರದಿಂದ ಸ್ವಲ್ಪ ದೂರದಲ್ಲಿ ಮಸೀದಿ ನಿರ್ಮಾಣವಾಗಬೇಕು. ಸಂಧಾನ ಮೂಲಕದ ವಿವಾದ ಇತ್ಯರ್ಥವಾದರೆ ಉತ್ತಮ. ಇಲ್ಲವಾದಲ್ಲಿ ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.
Advertisement
ಪ್ರಯಾಗ್‍ರಾಜ್‍ನಲ್ಲಿ ನಡೆದ ಹಿಂದೂಗಳ ಸಮ್ಮೇಳನದಲ್ಲಿ ರಾಮಮಂದಿರದ ಬಗ್ಗೆ ಚರ್ಚೆ ನಡೆದಿದೆ. 4 ತಿಂಗಳು ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆ ಬೇಡ ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.
Advertisement
ಬಿಜೆಪಿಗೆ ಲೋಕಸಭೆಯಲ್ಲಿ ಬಹುಮತ ಇದ್ದರೂ ರಾಜ್ಯಸಭೆಯಲ್ಲಿ ಇಲ್ಲ. ಸುಪ್ರೀಂ ಕೋರ್ಟ್ ನಲ್ಲೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರಾಮ ಮಂದಿರದ ಬಗ್ಗೆ ಏನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.