ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ಶಿರೂರು ಶ್ರೀಗಳು ಆನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಹೆಚ್ಚಿನ ಸಮಯ ಕಳೆದಿದ್ದಾರೆ. ಆದರೆ ಅವರ ಸಾವಿನ ಕುರಿತು ಮಠಾಧಿಪತಿಗಳ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಅಗಲಿಕೆ ನೋವು ತಂದಿದೆ. ಆದರೆ ಸ್ವಾಮೀಜಿಗಳು ಯಾರನ್ನು ಕೊಲೆ ಮಾಡುವುದಿಲ್ಲಾ. ಅವರದು ಒಂದು ಸಹಜ ಸಾವು ಎಂದು ಪೇಜಾವರ ಶ್ರೀಗಳು ಹೇಳಿದರು.
Advertisement
Advertisement
ಸಾವಿನ ಸಂಶಯದ ಕುರಿತ ಮಾಧ್ಯಮಗಳ ಪ್ರಶ್ನೆಗೆ, ವಿಷ ಪ್ರಾಶನ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದ ಪೇಜಾವರ ಶ್ರೀ ಗಳು, ಶಿರೂರು ಸ್ವಾಮೀಜಿಗಳಿಗೆ ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರನ್ನು ಕೊಲೆ ಮಾಡುವುದಿಲ್ಲ. ಅಲ್ಲದೆ ಅವರನ್ನು ಕೊಲೆ ಮಾಡಿ ಪಟ್ಟಕ್ಕೆ ಏರುವ ಉದ್ದೇಶ ಯಾರಿಗೂ ಇಲ್ಲ. ಕಾರಣ ಇಲ್ಲದೆ ಯಾರ ಮೇಲು ಸುಮ್ಮನೆ ಆರೋಪ ಮಾಡಬಾರದು. ಶ್ರೀಗಳ ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಒಂದು ಸಹಜ ಸಾವು. ಅವರ ಸಾವಿನ ಹಿಂದೆ ಸಂಶಯ ಮಾಡುವುದು ಸರಿಯಲ್ಲಾ. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದರು, ಕಳೆದ ಎರಡು ಮೂರ ವರ್ಷಗಳ ಹಿಂದಿನಿಂದ ಪೂಜೆ ಮಾಡುವುದನ್ನು ಸಹ ಬಿಟ್ಟಿದ್ದಾರೆ. ಹೀಗಾಗಿ ಅವರ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲಾ ಎಂದರು.
Advertisement
ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗಿಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್ ಗೆ ತೆರಳುತ್ತಿದ್ದ ಶ್ರೀಗಳು ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.